ದೇಶ

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Published On :

ಪೂಂಚ್: ಹೊಸ ವರ್ಷಾಚರಣೆಗೆ ಇನ್ನು ಕೇವಲ ಒಂದು ದಿನ ಇರುವಂತೆಯೇ ಗಡಿಯಲ್ಲಿ ಉಗ್ರರ ಕರಿ ನೆರಳು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್, ಕಿಶ್ತ್ವಾರ್ ಜಿಲ್ಲೆಗಳ ಕಣಿವೆ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮತ್ತು ಈ ಪ್ರದೇಶದ ಮೇಲೆ ನಿಗಾ ವಹಿಸಲು ಡ್ರೋನ್‌ ಮತ್ತಿತರ ವೈಮಾನಿಕ ಕಣ್ಗಾವಲು ಸಲಕರಣೆಗಳನ್ನು ಪಡೆಗಳು ಬಳಸಿವೆ.

ವರದಿಗಳ ಪ್ರಕಾರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎರಡು ಗುಂಪುಗಳು ಈ ಪ್ರದೇಶದಲ್ಲಿ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ಇಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಎನ್ ಕೌಂಟರ್ ನಡೆದಿತ್ತು.

ಶಂಕಿತ ಭಯೋತ್ಪಾದಕರ ಚಲನವಲನದ ನಂತರ ಪೂಂಚ್‌ನ ಇಂಡೋ-ಪಾಕ್ ಗಡಿಯಲ್ಲಿ ಸೇನೆಯ ರೋಮಿಯೋ ಫೋರ್ಸ್ ಶೋಧ ಕಾರ್ಯಾಚರಣೆ ನಡೆಸಿತ್ತು. ವೈಮಾನಿಕ ಕಣ್ಗಾವಲು ಬೆಂಬಲ ಮತ್ತು ಸ್ನಿಫರ್ ಡಾಗ್‌ಗಳನ್ನು ಸಶಸ್ತ್ರ ಪಡೆ ಹೊಂದಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.