ದೇಶ

AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿ

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
Published On :

ಕೋಲ್ಕತ್ತಾ: ಎಸ್‌ಐಆರ್ ಎನ್ನುವುದು ಕೃತಕ ಬುದ್ಧಿಮತ್ತೆ (ಎಐ) ಸಹಾಯದಿಂದ ನಡೆಸಲಾಗುತ್ತಿರುವ ದೊಡ್ಡ 'ಹಗರಣ' ಎಂದು ದೂರಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಟ್ಟಿಯಿಂದ ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ ದೆಹಲಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಟಿಎಂಸಿ ಮುತ್ತಿಗೆ ಹಾಕಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

'SIR ನಿಂದ ಸುಮಾರು 60 ಜನರು ಸಾವಿಗೀಡಾಗಿದ್ದಾರೆ. ದಾಖಲೆ ಪರಿಶೀಲನೆ ವಿಚಾರಣೆಗೆ ವೃದ್ಧರನ್ನು ಕರೆಯಲಾಗುತ್ತಿದೆ. ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರರ ಹೆಸರನ್ನು ಅಳಿಸಿದರೂ ಸಹ, ಟಿಎಂಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುತ್ತದೆ' ಎಂದು ಅವರು ಹೇಳಿದರು.

ರಾಜ್ಯದ ಜನರು ಇಂತಹ 'ಕಿರುಕುಳ'ವನ್ನು ಸಹಿಸುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜನರು ಬಿಡುವುದಿಲ್ಲ ಎಂದು ಅವರು ಹೇಳಿದರು.

ಚುನಾವಣೆಗಳು ಬಂದಾಗಲೆಲ್ಲಾ 'ಸೋನಾರ್ ಬಾಂಗ್ಲಾ' ನಿರ್ಮಿಸುವುದಾಗಿ ಬಿಜೆಪಿ ಭರವಸೆ ನೀಡಿದ್ದರೂ, ವಾಸ್ತವದಲ್ಲಿ, ಅದು ಆಳುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಥಳಿಸಲಾಗುತ್ತದೆ' ಎಂದು ಬ್ಯಾನರ್ಜಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.