2012 ಪುಣೆ ಬಾಂಬ್ ಸ್ಫೋಟ ಆರೋಪಿ ಅನಾಮಿಕರ ಗುಂಡೇಟಿಗೆ ಬಲಿ!
ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ..

ಪುಣೆ: 2012ರ ಪುಣೆ ಸ್ಫೋಟ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.
2012ರ ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
50 ವರ್ಷದ ಜಹಗೀರ್ದಾರ್ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ದ್ವಿಚಕ್ರ ವಾಹನದಲ್ಲಿ ಬಂದ ಮತ್ತೊಬ್ಬ ವ್ಯಕ್ತಿಯೊಂದಿಗೆ ಹಿಂತಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮೇಲೆ ದಾಳಿ ಮಾಡಿದ್ದಾರೆ.
ಗುಂಡೇಟಿನಿಂದ ತೀವ್ರ ಗಾಯಗೊಂಡ ಜಹಗೀರ್ದಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಅವರು ಸಾವನ್ನಪ್ಪಿದ್ದರು. ದಾಳಿಯ ಹಿಂದಿನ ಉದ್ದೇಶ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆಗಾಗಿ ಬಹು ತಂಡಗಳನ್ನು ರಚಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಅಹಲ್ಯಾನಗರ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.
ಪುಣೆ ಸ್ಫೋಟ ಆರೋಪಿ
ಜಂಗ್ಲಿ ಮಹಾರಾಜ್ ರಸ್ತೆ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜಹಗೀರ್ದಾರ್ ಅವರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿತ್ತು.
ಆಗಸ್ಟ್ 1, 2012 ರಂದು ಪುಣೆಯ ಹೃದಯಭಾಗದಲ್ಲಿರುವ ಜನನಿಬಿಡ ರಸ್ತೆ, ಬಾಲಗಂಧರ್ವ ಥಿಯೇಟರ್ ಬಳಿ, ದೇನಾ ಬ್ಯಾಂಕ್ ಶಾಖೆ, ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್ ಮತ್ತು ಗರ್ವಾರೆ ಸೇತುವೆ ಬಳಿ ನಾಲ್ಕು ಸಂಘಟಿತ ಕಡಿಮೆ ತೀವ್ರತೆಯ ಸ್ಫೋಟಗಳು ಸಂಭವಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



