Union Budget 2025: ಹೋಂಸ್ಟೇಗಳಿಗೆ ಮುದ್ರಾ ಸಾಲ; ರಾಜ್ಯಗಳ ಸಹಭಾಗಿತ್ವದಲ್ಲಿ 50 ಪ್ರವಾಸಿ ತಾಣಗಳ ಅಭಿವೃದ್ಧಿ
ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ ಮತ್ತು ಹೋಂಸ್ಟೇಗಳಿಗೆ ಮುದ್ರಾ ಸಾಲವನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಭಗವಾನ್ ಬುದ್ಧನ ಜೀವನ ಮತ್ತು ಬೋಧನೆಗಳಿಗೆ ಮಹತ್ವವಾದ ಸ್ಥಳಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ವಿಶೇಷ ಗಮನ ನೀಡುತ್ತದೆ ಎಂದು ಹೇಳಿದರು.
2025-26ರ ಬಜೆಟ್ ಅನ್ನು ಮಂಡಿಸಿದ ಸಚಿವೆ, ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಿಂದ ಬಿಹಾರದ ಮಿಥಿಲಾಂಚಲ್ ಪ್ರದೇಶದಲ್ಲಿ 50,000 ಹೆಕ್ಟೇರ್‌ಗೆ ಲಾಭವಾಗಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



