ದೇಶ

ಬಜೆಟ್‌ನಲ್ಲಿ ಕೇವಲ 574 ಕೋಟಿ ರೂ ಹಂಚಿಕೆ; ಈ ವರ್ಷವೂ ಜನಗಣತಿ ಅನುಮಾನ

2021-22ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಜನಗಣತಿ ಮತ್ತು ಎನ್ ಪಿಆರ್ ಗೆ 3,768 ಕೋಟಿ ಹಂಚಿಕೆ ಮಾಡಲಾಗಿತ್ತು.

ಬಜೆಟ್‌ನಲ್ಲಿ ಕೇವಲ 574 ಕೋಟಿ ರೂ ಹಂಚಿಕೆ; ಈ ವರ್ಷವೂ ಜನಗಣತಿ ಅನುಮಾನ
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್‌ನಲ್ಲಿ ಜನಗಣತಿ, ಸಮೀಕ್ಷೆ ಮತ್ತು ರಿಜಿಸ್ಟ್ರಾರ್ ಜನರಲ್ ಇಂಡಿಯಾಗೆ ಕೇವಲ ರೂ. 574.80 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ದಶಕದಿಂದ ಕಾಯುತ್ತಿರುವ ಜನಗಣತಿ ಈ ವರ್ಷವೂ ನಡೆಯುವುದು ಅನುಮಾನವಾಗಿದೆ.

2019 ರಲ್ಲಿ ಕೇಂದ್ರ ಸರ್ಕಾರವು 2021 ರ ರಾಷ್ಟ್ರೀಯ ಜನಗಣತಿಯನ್ನು ರೂ. 8,754.23 ಕೋಟಿ ವೆಚ್ಚದಲ್ಲಿ ನಡೆಸಲು ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್‌ಪಿಆರ್) ಯನ್ನು ರೂ. 3,941.35 ಕೋಟಿ ವೆಚ್ಚದಲ್ಲಿ ನವೀಕರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತ್ತು. ಆದರೆ ಕೋವಿಡ್ ಕಾರಣದಿಂದ 2021ರಲ್ಲಿ ಜನಗಣತಿ ನಡೆದಿರಲಿಲ್ಲ.

2021-22ರ ಹಣಕಾಸು ವರ್ಷದ ಬಜೆಟ್‌ನಲ್ಲಿ ಜನಗಣತಿ ಮತ್ತು ಎನ್ ಪಿಆರ್ ಗೆ 3,768 ಕೋಟಿ ಹಂಚಿಕೆ ಮಾಡಲಾಗಿತ್ತು. ಅಲ್ಲದೆ ಕಳೆದ ವರ್ಷ ಮಂಡಿಸಿದ 2024-25ರಲ್ಲಿ 572 ಕೋಟಿ. ರೂ. ಮೀಸಲಿಡಲಾಗಿತ್ತು. ಆದರೆ ಈ ಬಾರಿಯ ಅನುದಾನ ಗಮನಿಸಿದರೆ ಈ ವರ್ಷವೂ ಜನಗಣತಿ ನಡೆಯುವುದು ಅನುಮಾನವಾಗಿದೆ.

ಜನಗಣತಿ ಮತ್ತು NPR ಸಿದ್ಧಪಡಿಸುವ ಸಂಪೂರ್ಣ ಪ್ರಕ್ರಿಯೆಗೆ ಸುಮಾರು 12,000 ಕೋಟಿ ರೂ.ಗಳಿಗಿಂತ ಹೆಚ್ಚು ವೆಚ್ಚವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.