ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಪತ್ರ
ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಕೆಲವು ಆಪಾದಿತ ಘಟನೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನವದೆಹಲಿ: ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದು, ಚುನಾವಣಾ ಆಯೋಗವು ತನ್ನ ನವದೆಹಲಿ ಕ್ಷೇತ್ರದಲ್ಲಿ ಸ್ವತಂತ್ರ ವೀಕ್ಷಕರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಕೇಜ್ರಿವಾಲ್, ಇಂತಹ ಘಟನೆಗಳಲ್ಲಿ ಭಾಗಿಯಾಗಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಮತ್ತು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಜ್ರಿವಾಲ್ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ಹಾಗೂ ದೆಹಲಿ ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತಮ್ಮ ನವದೆಹಲಿ ಕ್ಷೇತ್ರದಲ್ಲಿ ಎಎಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಬಗ್ಗೆ ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶನಿವಾರ ಇಲ್ಲಿನ ರೋಹಿಣಿ ಪ್ರದೇಶದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗಿಯಾಗಿದ್ದ ಎಎಪಿ ಅಭ್ಯರ್ಥಿ ಮೊಹಿಂದರ್ ಗೋಯಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಶನಿವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಬಿಜೆಪಿ ಕಾರ್ಯಕರ್ತರು ಆಪ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ನವದೆಹಲಿ ಕ್ಷೇತ್ರದಲ್ಲಿ ಪ್ರಚಾರ ಮಾಡದಂತೆ ತಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ನವದೆಹಲಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಲ್ಲಿ ಕೇಜ್ರಿವಾಲ್ ಅವರು ಬಿಜೆಪಿಯ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ವಿರುದ್ಧ ಕಣಕ್ಕಿಳಿದಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ. ಫೆಬ್ರುವರಿ 8 ರಂದು ಮತ ಎಣಿಕೆ ನಂತರ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



