ಕುಂಭಮೇಳ ಕಾಲ್ತುಳಿತ 'ದೊಡ್ಡ ಘಟನೆಯೇನಲ್ಲ': ಬಿಜೆಪಿ ಸಂಸದೆ ಹೇಮಾ ಮಾಲಿನಿ
ಜನವರಿ 29, ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ನವದೆಹಲಿ: ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ "ದೊಡ್ಡ ಘಟನೆಯೇನಲ್ಲ". ಆದರೆ ಅದನ್ನು "ದೊಡ್ಡದಾಗಿ ಬಿಂಬಿಸಲಾಗುತ್ತಿದೆ" ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ಮಂಗಳವಾರ ಹೇಳಿದ್ದಾರೆ. ಸಭೆಯನ್ನು ಉತ್ತಮವಾಗಿ ನಿರ್ವಹಿಸಲಾಗುತ್ತಿದೆ ಎಂದು ಅವರು ಮಂಗಳವಾರ ಹೇಳಿದ್ದಾರೆ.
ಜನವರಿ 29, ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ರಯಾಗ್‌ರಾಜ್‌ನ ಸಂಗಮ್ ಪ್ರದೇಶದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನ ಪ್ರಾಣ ಕಳೆದುಕೊಂಡಿದ್ದು, 60 ಮಂದಿ ಗಾಯಗೊಂಡಿದ್ದಾರೆ.
"ನಾವು ಕುಂಭಕ್ಕೆ ಹೋಗಿದ್ದೆವು... ನಾವು ಚೆನ್ನಾಗಿ ಸ್ನಾನ ಮಾಡಿದೆವು... ಎಲ್ಲವನ್ನೂ ಚೆನ್ನಾಗಿ ನಿರ್ವಹಿಸಲಾಗಿತ್ತು. ಇದರ ಹೊರತಾಗಿಯೂ ಘಟನೆ(ಕಾಲ್ತುಳಿತ) ನಡೆದಿದ. ಅದು ದೊಡ್ಡ ಘಟನೆಯೇನಲ್ಲ. ಆದರೆ ಅದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ... ಕುಂಭ ಮೇಳವನ್ನು ತುಂಬಾ ಚೆನ್ನಾಗಿ ನಿರ್ವಹಿಸಲಾಗಿದೆ. ತುಂಬಾ ಜನರು ಬರುತ್ತಿದ್ದಾರೆ, ಅದನ್ನು ನಿರ್ವಹಿಸುವುದು ತುಂಬಾ ಕಷ್ಟ. ಆದರೆ ನಾವು ನಮ್ಮ ಕೈಲಾದಷ್ಟು ಮಾಡುತ್ತಿದ್ದೇವೆ..." ಎಂದು ಹೇಮಾ ಮಾಲಿನಿ ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಸರ್ಕಾರ ಮರೆಮಾಚುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿರುವ ಬಗ್ಗೆ ಕೇಳಿದಾಗ, "ಅವರು ಏನು ಬೇಕಾದರೂ ಹೇಳುತ್ತಾರೆ... ತಪ್ಪು ತಪ್ಪಾಗಿ ಹೇಳುವುದೇ ಅವರ ಕೆಲಸ" ಎಂದರು.
ಮಹಾ ಕುಂಭದಲ್ಲಿ ನಡೆದ ಕಾಲ್ತುಳಿತ ದುರಂತವು ಮಂಗಳವಾರ ಸಂಸತ್ತಿನ ಎರಡೂ ಸದನಗಳಲ್ಲೂ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಸರ್ಕಾರವು ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



