ದೇಶ

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

ದೆಹಲಿ ವಿಧಾನಸಭಾ ಚುನಾವಣೆ 2025: ಮತದಾನ ಪ್ರಕ್ರಿಯೆ ಆರಂಭ, ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?
ದೆಹಲಿ ಚುನಾವಣೆ.
Published On :

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ 2025ರ ಮತದಾನ ಪ್ರಕ್ರಿಯೆ ಬುಧವಾರ ಆರಂಭಗೊಂಡಿದ್ದು, ಪ್ರಧಾನ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮುಂದಾಳತ್ವದ ಆಮ್​ ಆದ್ಮಿ ಪಕ್ಷದ ನಡುವೆ ಗೆಲುವಿಗಾಗಿ ಭಾರೀ ಪೈಪೋಟಿ ಶುರುವಾಗಿದೆ. ಹೀಗಾಗಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ, 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಹಾಗೂ 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.

70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಬವಾಗಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ. ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಸುಳಿವು ದೊರೆಯಲಿದೆ.

ಮಾಜಿ ಮುಖ್ಯಮಂತ್ರ ಅರವಿಂದ ಕೇಜ್ರಿವಾಲ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ಧ ಬಿಜೆಪಿಯಿಂದ ರಮೇಶ್ ಬಿದೂರಿ ಕಾಂಗ್ರೆಸ್ ನಿಂದ ಅಲ್ಕಾ ಲಂಬಾ ಕಣದಲ್ಲಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ ಮೊದಲಾದವರು ಕಣದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.