ದೇಶ

Madhya Pradesh: ಐಎಎಫ್‌ನ ಮಿರಾಜ್ 2000 ಯುದ್ಧ ವಿಮಾನ ಪತನ

ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರ ಜಿಗಿದಿದ್ದು, ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

Madhya Pradesh: ಐಎಎಫ್‌ನ ಮಿರಾಜ್ 2000 ಯುದ್ಧ ವಿಮಾನ ಪತನ
Published On :

ಶಿವಪುರಿ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಬಹ್ರೆತಾ ಸಾನಿ ಗ್ರಾಮದ ಬಳಿ ಗುರುವಾರ ಭಾರತೀಯ ವಾಯುಪಡೆ(ಐಎಎಫ್)ಯ ಮಿರಾಜ್ 2000 ತರಬೇತಿ ನಿರತ ಯುದ್ಧ ವಿಮಾನ ಪತನಗೊಂಡಿದೆ.

ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರ ಜಿಗಿದಿದ್ದು, ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಅಪಘಾತದ ನಂತರ, ಸ್ಥಳೀಯ ಅಧಿಕಾರಿಗಳು, ರಕ್ಷಣಾ ತಂಡವನ್ನು ತ್ವರಿತವಾಗಿ ಸ್ಥಳಕ್ಕೆ ಕಳುಹಿಸಿದರು. ಯುದ್ಧ ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದಿಲ್ಲ.

ಘಟನಾ ಸ್ಥಳದಲ್ಲಿ ಬೆಂಕಿ ಮತ್ತು ಹೊಗೆ ಕಂಡು ಬಂದ ಹಿನ್ನಲೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಹೊಲದಲ್ಲಿ ವಿಮಾನದ ಅವಶೇಷಗಳು ಬಿದ್ದಿದ್ದು, ನೂರಾರು ಜನ ಅವಶೇಷಗಳ ಸುತ್ತಲೂ ಜಮಾಯಿಸಿದ್ದಾರೆ.

ಇನ್ನು ರಕ್ಷಣಾ ಸಚಿವಾಲಯ ಘಟನೆ ಬಗ್ಗೆ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.