10 ಲಕ್ಷ ರೂ ವಂಚನೆ ಪ್ರಕರಣ: ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಕೋರ್ಟ್
ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ಕ್ಕೆ ನಿಗದಿಯಾಗಿದೆ.

ಲೂಧಿಯಾನ, ಪಂಜಾಬ್: ಆಪಾದಿತ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ನ್ಯಾಯಾಲಯವು ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಲೂಧಿಯಾನ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ವಾರಂಟ್ ಹೊರಡಿಸಿದ್ದಾರೆ.
ಮೋಹಿತ್ ಶುಕ್ಲಾ ಎಂಬಾತನ ವಿರುದ್ಧ ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಎಂಬುವವರು 10 ಲಕ್ಷ ರೂ.ಗಳ ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ತನಗೆ ಆಮಿಷ ಒಡ್ಡಿದ್ದಾರೆ ಎಂದು ದೂರಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಹೇಳಲು ಸೋನು ಸೂದ್ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ, ಅವರು ಗೈರಾದ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಹೊರಡಿಸಲಾಗಿದೆ.
ಲೂಧಿಯಾನ ನ್ಯಾಯಾಲಯವು ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗೆ ಸೂಚಿಸಿದೆ.
ನ್ಯಾಯಾಲಯಕ್ಕೆ ಹಾಜರಾಗುವಂತೆ ಸೋನು ಸೂದ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ಹೀಗಾಗಿ, ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 10ಕ್ಕೆ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



