ದೇಶ

ಗಡಿಯಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ: BSF ಯೋಧರಿಂದ ಮೂವರು ಪಾಕ್ ಸೈನಿಕರು ಸೇರಿದಂತೆ 7 ನುಸುಳುಕೋರರ ಹತ್ಯೆ!

ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಡಿಯಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ: BSF ಯೋಧರಿಂದ ಮೂವರು ಪಾಕ್ ಸೈನಿಕರು ಸೇರಿದಂತೆ 7 ನುಸುಳುಕೋರರ ಹತ್ಯೆ!
ಸಂಗ್ರಹ ಚಿತ್ರ
Published On :

ಶ್ರೀನಗರ: ಪಾಕಿಸ್ತಾನಿ ನುಸುಳುಕೋರರ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನಿ ನುಸುಳುಕೋರರು ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ವರದಿಯಾಗಿದೆ.

ಫೆಬ್ರವರಿ 4-5ರ ರಾತ್ರಿ ಪಾಕಿಸ್ತಾನಿಗರು ಗಡಿಯೊಳಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಭಾರತೀಯ ಸೇನೆ ಗಡಿ ನುಸುಳುವಿಕೆಯನ್ನು ತಡೆದಿದ್ದು ಇದೇ ವೇಳೆ 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಮೃತರ ಪೈಕಿ ಮೂವರು ಪಾಕಿಸ್ತಾನಿ ಸೇನಾ ಸಿಬ್ಬಂದಿ ಇದ್ದರು ಎಂದು ನಂಬಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಆಚರಿಸುತ್ತಿದ್ದಾಗ, ಪಾಕಿಸ್ತಾನಿಗಳು ತಮ್ಮ ಭಾರತ ವಿರೋಧಿ ನಡೆಯನ್ನು ಮುಂದುವರಿಸಲು ಈ ಘಟನೆಯನ್ನು ನಡೆಸಿದರು. ಅದು ಭಾರತ ವಿರೋಧಿ ಕಾರ್ಯಸೂಚಿಯನ್ನು ಮುನ್ನಡೆಸುವ ಪ್ರಚಾರದ ಅಭಿಯಾನವಾಗಿತ್ತು.

ಪಾಕಿಸ್ತಾನದ ವಿಶೇಷ ಪಡೆಗಳಾದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಗಡಿಯನ್ನು ಪ್ರವೇಶಿಸಿದಾಗ ಭಾರತೀಯ ಸೇನೆಯು ಸೂಕ್ತ ಪ್ರತ್ಯುತ್ತರ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.