ದೇಶ

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ

ಫೆಬ್ರವರಿ 11 ರಂದು ಸಂಜೆ 4 ಗಂಟೆಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ಸಿಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

Invest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಹ್ವಾನಿಸಿದ ಫೋಟೋ
Published On :

ಬೆಂಗಳೂರು: ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 11 ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಶನಿವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಚಿವರು, ಪ್ರಮುಖ ಕ್ಷೇತ್ರಗಳಲ್ಲಿ ರೂ. 10 ಲಕ್ಷ ಕೋಟಿ ಮೊತ್ತದ ಹೂಡಿಕೆಯನ್ನು ರಾಜ್ಯ ನಿರೀಕ್ಷಿಸಿದೆ. ಫೆಬ್ರವರಿ 11 ರಂದು ಸಂಜೆ 4 ಗಂಟೆಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ಸಿಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋರ್ಟಲ್ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕೇಂದ್ರದ ಎಲ್ಲಾ ಸಚಿವರನ್ನು ಆಹ್ವಾನಿಸಿದ್ದೇವೆ. ಅವರಲ್ಲಿ ರಾಜನಾಥ್ ಸಿಂಗ್, ಪ್ರಲ್ಹಾದ್ ಜೋಶಿ, ಹೆಚ್. ಡಿ. ಕುಮಾರಸ್ವಾಮಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ರಾಜ್ಯದ ಕೈಗಾರಿಕಾ ಬೆಳವಣಿಗೆಯನ್ನು ರೂಪಿಸಿದ 14 ಮುಂಚೂಣಿ ಕೈಗಾರಿಕೆಗಳನ್ನು ಗುರುತಿಸಿ ಮೊಟ್ಟಮೊದಲ ಬಾರಿಗೆ ಇನ್ವೆಸ್ಟ್ ಕರ್ನಾಟಕ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಜಿಲ್ಲಾಮಟ್ಟದಲ್ಲಿ ಕೌಶಲ್ಯತೆ, ಮಹಿಳಾ ಉದ್ಯಮಿಗಳು ಮತ್ತು ವಲಯದ ಸಾಧನೆಗಳಿಗಾಗಿ 35ಕ್ಕೂ ಹೆಚ್ಚು ಅತ್ಯುತ್ತಮ ಉದ್ಯಮಗಳಿಗೆ ಮೊದಲ ಬಾರಿಗೆ SME ಪ್ರಶಸ್ತಿ ನೀಡಲಾಗುತ್ತಿದೆ. 60 ಕ್ಕೂ ಹೆಚ್ಚು ಕಂಪನಿಗಳು ಮತ್ತು ಸ್ಟಾರ್ಟ್‌ಅಪ್‌ಗಳು ಉತ್ಪಾದನೆ, ಚಲನಶೀಲತೆ ಮತ್ತು ಸುಧಾರಿತ ರೊಬೊಟಿಕ್ಸ್‌ಗಳಲ್ಲಿನ ಪ್ರಗತಿಯನ್ನು ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್‌ಪೋದಲ್ಲಿ ಪ್ರದರ್ಶಿಸುತ್ತವೆ ಎಂದು ಅವರು ತಿಳಿಸಿದರು.

ಫೆ. 13ರವರೆಗೆ ನಡೆಯಲಿರುವ ಸಮಾವೇಶದಲ್ಲಿ ಉದ್ಯಮಿಗಳಾದ ಆನಂದ್ ಮಹೀಂದ್ರಾ, ಕುಮಾರ್ ಮಂಗಳಂ ಬಿರ್ಲಾ, ಶಶಿ ತರೂರ್, ಕಿರಣ್ ಮಂಜೂದ್ಹಾರ್ ಶಾ, ಮಾರ್ಟಿನ್ ಲುಂಡ್‌ಸ್ಟೆಡ್, ಜಾರ್ಜ್ ಪಾಪಂಡ್ರೂ, ಆನ್ ಡಂಕಿನ್, ಓಡೆ ಅಬ್ಬೋಷ್, ನಿರ್ದೇಶಕ ಕಿರಣ್ ರಾವ್ ಸೇರಿದಂತೆ ಅನೇಕ ಮಂದಿ ಮಾತನಾಡಲಿದ್ದಾರೆ. 18 ದೇಶಗಳ ಸಹಕಾರ ಮತ್ತು 9 ದೇಶಗಳ ಫೆವಿಲಿಯನ್ ನೊಂದಿಗೆ ನಡೆಯುವ ಶೃಂಗಸಭೆಯು ಜಾಗತಿಕ ಮಟ್ಟದಲ್ಲಿ ನಿರ್ಣಾಯಕ ತಂತ್ರಜ್ಞಾನ ಮತ್ತು ನಾವೀನ್ಯತೆ ವಿನಿಮಯವನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.