ದೆಹಲಿ ಗದ್ದುಗೆ ಏರಿದ BJP: ಲೋಕಸಭೆಯಲ್ಲಿ ಮೋದಿ.. ಮೋದಿ... ಘೋಷಣೆ
ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿ ಆರಂಭಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರ ಘೋಷಣೆಗಳನ್ನು ಕೂಗಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಗೆಲುವು ಸಾಧಿಸಿದ್ದು, ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಮೋದಿ... ಮೋದಿ... ಎಂದು ಘೋಷಣೆಗಳನ್ನು ಕೂಗಿದರು.
ಸ್ಪೀಕರ್ ಓಂ ಬಿರ್ಲಾ ಅವರು ಪ್ರಶ್ನೋತ್ತರ ಅವಧಿ ಆರಂಭಿಸುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರ ಘೋಷಣೆಗಳನ್ನು ಕೂಗಿದರು.
ಏತನ್ಮಧ್ಯೆ ಕಾಂಗ್ರೆಸ್ ಸದಸ್ಯ ಗೌರವ್ ಗೊಗೊಯ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಕೂಡ ಕೆಲವು ಸಮಸ್ಯೆಗಳ ಪ್ರಸ್ತಾಪಿಸಿ, ಚರ್ಚೆಗೆ ಆಗ್ರಹಿಸಿದರು.
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, 70 ವಿಧಾನಸಭಾ ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದು 26 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಶೂನ್ಯ ಸ್ಥಾನ ಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



