ದೇಶ

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ರಣವೀರ್ ಅಲ್ಹಾಬಾದಿಯಾ ವಿರುದ್ಧ ಇಂದೋರ್‌ನಲ್ಲಿ ಮತ್ತೊಂದು ದೂರು ದಾಖಲು

ಈ ಸಂಬಂಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ. ಸ್ಥಳೀಯ ವಕೀಲರಾದ ಅಮನ್ ಮಾಳವಿಯಾ ಅವರು ದೂರು ದಾಖಲಿಸಿದ್ದಾರೆ. ದೂರಿನ ಬಗ್ಗೆ ತನಿಖೆ ನಡೆಸಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ರಣವೀರ್ ಅಲ್ಹಾಬಾದಿಯಾ ವಿರುದ್ಧ ಇಂದೋರ್‌ನಲ್ಲಿ ಮತ್ತೊಂದು ದೂರು ದಾಖಲು
ರಣವೀರ್ ಅಲ್ಹಾಬಾದಿಯಾ
Published On :

ಇಂದೋರ್: ಹಾಸ್ಯನಟ ಸಮಯ್ ರೈನಾ ಅವರ ಯೂಟ್ಯೂಬ್ ರಿಯಾಲಿಟಿ ಶೋ 'ಇಂಡಿಯಾಸ್ ಗಾಟ್ ಲ್ಯಾಟೆಂಟ್' ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು 'ಅಶ್ಲೀಲ ಮತ್ತು ಅಸಭ್ಯ' ಹೇಳಿಕೆ ನೀಡಿದ ಯೂಟ್ಯೂಬರ್ ಮತ್ತು ಪಾಡ್‌ಕಾಸ್ಟರ್ ರಣವೀರ್ ಅಲ್ಹಾಬಾದಿಯಾ ವಿರುದ್ಧ ಮಂಗಳವಾರ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ. ಸ್ಥಳೀಯ ವಕೀಲರಾದ ಅಮನ್ ಮಾಳವಿಯಾ ಅವರು ದೂರು ದಾಖಲಿಸಿದ್ದಾರೆ. ದೂರಿನ ಬಗ್ಗೆ ತನಿಖೆ ನಡೆಸಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಅಲ್ಹಾಬಾದಿಯಾ, ಸಮಯ್ ರೈನಾ ಮತ್ತು ಇತರ ಸೆಲೆಬ್ರಿಟಿಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಸಭ್ಯತೆಯ ಗಡಿ ದಾಟಿದ್ದಾರೆ ಎಂದು ಮಾಳವಿಯಾ ದೂರಿದ್ದಾರೆ.

ಅಲ್ಹಾಬಾದಿಯಾ ಮತ್ತು ರೈನಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಆ ಕಾರ್ಯಕ್ರಮವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಕೆಲವು ಇತರ ವಕೀಲರು ಮಾಳವಿಯಾ ಅವರೊಂದಿಗೆ ಪೊಲೀಸ್ ಠಾಣೆಗೆ ಬಂದರು.

31 ವರ್ಷದ ಅಲ್ಹಾಬಾದಿಯಾ ಅವರು ಸೋಮವಾರ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ನೀಡಿದ ಪೋಷಕರು ಮತ್ತು ಲೈಂಗಿಕತೆಯ ಬಗೆಗಿನ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಸಾಮಾಜಿಕ ಮಾಧ್ಯಮದಲ್ಲಿ ಅವರ ಹೇಳಿಕೆ ವೈರಲ್ ಆದ ನಂತರ ವಿಡಿಯೋ ಮಾಡಿದ್ದ ಅಲ್ಹಾಬಾದಿಯಾ ಅವರು ಕ್ಷಮೆಯಾಚಿಸಿದ್ದರು ಮತ್ತು ವಿವಾದಾತ್ಮಕ ಭಾಗವನ್ನು ತೆಗೆದುಹಾಕಲು ಕಾರ್ಯಕ್ರಮದ ಆಯೋಜಕರನ್ನು ಕೇಳಿರುವುದಾಗಿ ಹೇಳಿದರು.

ಗುವಾಹಟಿ ಪೊಲೀಸರು ಕೂಡ ಸೋಮವಾರ ಅಲ್ಹಾಬಾದಿಯಾ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.