ಕ್ರಿಮಿನಲ್ ಪರಾರಿಯಾಗಲು ನೆರವು: AAP ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ FIR ದಾಖಲು
ಶಾಸಕ ಖಾನ್ ಮತ್ತು ಕ್ರೈಂ ಬ್ರಾಂಚ್ ತಂಡದ ನಡುವಿನ ತೀವ್ರ ವಾಗ್ವಾದ ನಡೆಯುತ್ತಿತ್ತು. ಈ ಗೊಂದಲದ ಲಾಭಪಡೆದುಕೊಂಡ ಶಹಬಾಜ್ ಖಾನ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪಲಾಯನ ಮಾಡಿದ್ದ.

ನವದೆಹಲಿ: ವಾಂಟೆಡ್ ಕ್ರಿಮಿನಲ್ ಒಬ್ಬ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ದೆಹಲಿಯ ZZP ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕೊಲೆ ಯತ್ನದ ಆರೋಪ ಎದುರಿಸುತ್ತಿರುವ ಶಹಬಾಜ್ ಖಾನ್ ಎಂಬಾತನನ್ನು ಬಂಧಿಸಲು ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜಾಮಿಯಾದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಅಧಿಕಾರಿಗಳು ಆರೋಪಿಯನ್ನು ಯಶಸ್ವಿಯಾಗಿ ಕಸ್ಟಡಿಗೆ ತೆಗೆದುಕೊಂಡಿದ್ದ ವೇಳೆ ಅಮಾನತುಲ್ಲಾ ಖಾನ್ ಮಧ್ಯಪ್ರವೇಶಿಸಿ, ಬಂಧನದ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿ ವ್ಯಕ್ತಿಯು ಅಪರಾಧಿಯಲ್ಲ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದರು.
ಶಾಸಕ ಖಾನ್ ಮತ್ತು ಕ್ರೈಂ ಬ್ರಾಂಚ್ ತಂಡದ ನಡುವಿನ ತೀವ್ರ ವಾಗ್ವಾದ ನಡೆಯುತ್ತಿತ್ತು. ಈ ಗೊಂದಲದ ಲಾಭಪಡೆದುಕೊಂಡ ಶಹಬಾಜ್ ಖಾನ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪಲಾಯನ ಮಾಡಿದ್ದ. ಅಮಾನತುಲ್ಲಾ ಖಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಾಮಿಯಾ ನಗರದಲ್ಲಿ ಪೊಲೀಸ್ ತಂಡದ ಮೇಲೆ ದಾಳಿ ನಡೆಸಿದ ಆರೋಪ ಹೊತ್ತಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಅಮನತುಲ್ಲಾ ಖಾನ್ ಅವರನ್ನು ಬಂಧಿಸಲು ದೆಹಲಿ ಪೊಲೀಸರು ಹಲವೆಡೆ ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



