ದೇಶ

JEE-Main: ಕರ್ನಾಟಕದ ಕುಶಾಗ್ರ ಗುಪ್ತಾ ಸೇರಿದಂತೆ 14 ಅಭ್ಯರ್ಥಿಗಳಿಗೆ 100ಕ್ಕೆ 100 ಅಂಕ

14 ಅಭ್ಯರ್ಥಿಗಳಲ್ಲಿ 12 ಮಂದಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಉಳಿದ ಇಬ್ಬರು ಒಬಿಸಿ ಮತ್ತು ಎಸ್ ಸಿ ವರ್ಗಕ್ಕೆ ಸೇರಿದವರಾಗಿದ್ದಾರೆ.

JEE-Main: ಕರ್ನಾಟಕದ ಕುಶಾಗ್ರ ಗುಪ್ತಾ ಸೇರಿದಂತೆ 14 ಅಭ್ಯರ್ಥಿಗಳಿಗೆ 100ಕ್ಕೆ 100 ಅಂಕ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ JEE-Main 2025ರ ಮೊದಲ ಆವೃತ್ತಿಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ ಕುಶಾಗ್ರ ಗುಪ್ತಾ ಸೇರಿದಂತೆ ದೇಶಾದ್ಯಂತ 14 ಅಭ್ಯರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NIA) ಮಂಗಳವಾರ ಫಲಿತಾಂಶ ಪ್ರಕಟಿಸಿದ್ದು, ನೂರಕ್ಕೆ ನೂರು ಅಂಕ ಗಳಿಸಿದವರಲ್ಲಿ ಐವರು ರಾಜಸ್ಥಾನದವರು, ಒಬ್ಬರು ದೆಹಲಿ ಮತ್ತು ಉತ್ತರ ಪ್ರದೇಶದವರು, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್ , ತೆಲಂಗಾಣ, ಮಹಾರಾಷ್ಟ್ರದಿಂದ ತಲಾ ಒಬ್ಬರು ಇದ್ದಾರೆ.

14 ಅಭ್ಯರ್ಥಿಗಳಲ್ಲಿ 12 ಮಂದಿ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಉಳಿದ ಇಬ್ಬರು ಒಬಿಸಿ ಮತ್ತು ಎಸ್ ಸಿ ವರ್ಗಕ್ಕೆ ಸೇರಿದವರಾಗಿದ್ದಾರೆ. ಮೊದಲ ಆವೃತ್ತಿಯಲ್ಲಿ 12. 58 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಅಸ್ಸಾಮಿ, ಬೆಂಗಾಳಿ, ಇಂಗ್ಲೀಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ತೆಲುಗು, ತಮಿಳು, ಉರ್ದು ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡನೇ ಆವೃತ್ತಿ ಪರೀಕ್ಷೆ ಏಪ್ರಿಲ್ ನಲ್ಲಿ ನಿಗದಿಯಾಗಿದೆ. ಎರಡೂ ಆವೃತ್ತಿಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಆಧರಿಸಿ ಅಭ್ಯರ್ಥಿಗಳ Rank ಪ್ರಕಟಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.