ದೇಶ

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ

ಸಂಸ್ಥೆಯಲ್ಲಿ ಸುಮಾರು ಮೂರು ತಿಂಗಳಿನಿಂದ ರ‍್ಯಾಗಿಂಗ್ ನಡೆಯುತ್ತಿದೆ ಎಂದು ಆರೋಪಿಸಿ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ದೂರು ದಾಖಲಿಸಿದ ನಂತರ ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಕೇರಳ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ಗಳ ಮೇಲೆ ರ‍್ಯಾಗಿಂಗ್ ಮಾಡುತ್ತಿದ್ದ ಐವರ ಬಂಧನ
ಸಾಂದರ್ಭಿಕ ಚಿತ್ರ
Published On :

ಕೊಟ್ಟಾಯಂ: ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ಮೂರನೇ ವರ್ಷದ ಐದು ಮಂದಿ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಸಂಸ್ಥೆಯಲ್ಲಿ ಸುಮಾರು ಮೂರು ತಿಂಗಳಿನಿಂದ ರ‍್ಯಾಗಿಂಗ್ ನಡೆಯುತ್ತಿದೆ ಎಂದು ಆರೋಪಿಸಿ ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ದೂರು ದಾಖಲಿಸಿದ ನಂತರ ಪೊಲೀಸರು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಕಳೆದ ನವೆಂಬರ್‌ನಲ್ಲಿ ರ‍್ಯಾಗಿಂಗ್ ಪ್ರಾರಂಭವಾಯಿತು. ವೇಟ್‌ಲಿಫ್ಟಿಂಗ್‌ಗೆ ಬಳಸಲಾದ ಡಂಬಲ್‌ಗಳನ್ನು ಬಳಸಿ ತಮ್ಮನ್ನು ಬೆತ್ತಲೆಯಾಗಿ ನಿಲ್ಲಿಸುವಂತೆ ಸೀನಿಯರ್ ಗಳು ಒತ್ತಾಯಿಸಿದ್ದರು. ಕ್ರೂರ ಕೃತ್ಯಗಳಿಗೆ ಒಳಪಡಿಸಲಾಯಿತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಪಾಯಕಾರಿ ವಸ್ತುಗಳನ್ನು ಬಳಸಿ ಗಾಯಗೊಳಿಸಿದ ನಂತರ ಗಾಯಗಳ ಮೇಲೆ ಲೋಷನ್ ಹಚ್ಚಲಾಯಿತು. ಕಿರಿಯ ವಿದ್ಯಾರ್ಥಿಗಳ ಮುಖ, ತಲೆ ಮತ್ತು ಬಾಯಿಗೆ ಬಲವಂತವಾಗಿ ಹಿರಿಯ ವಿದ್ಯಾರ್ಥಿಗಳು ಕ್ರೀಮ್ ಹಚ್ಚಿದ್ದರು.

ಹಿರಿಯ ವಿದ್ಯಾರ್ಥಿಗಳು ಭಾನುವಾರ ರಜಾದಿನಗಳಂದು ಮದ್ಯ ಖರೀದಿಸಲು ಜೂನಿಯರ್ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದರು. ಆಗಾಗ್ಗೆ ಅವರ ಮೇಲೆ ಹಲ್ಲೆ ಮಾಡುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸೀನಿಯರ್ ವಿದ್ಯಾರ್ಥಿಗಳು ನೀಡುತ್ತಿದ್ದ ಕಿರುಕುಳವನ್ನು ಸಹಿಸಲಾಗದೆ, ಮೂವರು ವಿದ್ಯಾರ್ಥಿಗಳು ಕೊನೆಗೆ ಕೊಟ್ಟಾಯಂ ಗಾಂಧಿನಗರ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.