ಪ್ರಹ್ಲಾದ್ ಜೋಶಿ ನೇತೃತ್ವದ ಕೇಂದ್ರ ತಂಡದಿಂದ ರೈತ ಮುಖಂಡರೊಂದಿಗೆ ಸಭೆ
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶುಕ್ರವಾರ ಸಭೆ ನಡೆಸುವ ಕೇಂದ್ರ ತಂಡದ ನೇತೃತ್ವವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
28 ಸದಸ್ಯರ ರೈತರ ನಿಯೋಗ ಈ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಜೋಶಿ ಅವರು ಕೇಂದ್ರ ತಂಡದ ನೇತೃತ್ವ ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುದ್ದಿಯನ್ ಕೂಡ ಈ ಸಭೆಯಲ್ಲಿ ಹಾಜರಿರುತ್ತಾರೆ ಎಂದು ಅವರು ಹೇಳಿದ್ದಾರೆ.
ಪಂಜಾಬ್ನ ಮಹಾತ್ಮ ಗಾಂಧಿ ರಾಜ್ಯ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ಸಭೆ ನಡೆಯಲಿದೆ.
ರೈತರ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ 28 ಸದಸ್ಯರ ನಿಯೋಗವು ಸಭೆಯಲ್ಲಿ ಭಾಗವಹಿಸಲಿದೆ ಎಂದು ರೈತರು ತಿಳಿಸಿದ್ದಾರೆ.
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಖಾನೌರಿ ಪ್ರತಿಭಟನಾ ಸ್ಥಳದಿಂದ ಆಂಬ್ಯುಲೆನ್ಸ್ನಲ್ಲಿ ಸಭೆ ನಡೆಯುವ ಸ್ಥಳಕ್ಕೆ ದಲ್ಲೆವಾಲ್ ಅವರನ್ನು ಕರೆದೊಯ್ಯಲಾಗುತ್ತಿದೆ.
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಸಂಚಾಲಕರಾದ ದಲ್ಲೆವಾಲ್, ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



