ಅಂತರಧರ್ಮೀಯ ವಿವಾಹವಾಗುವುದರಲ್ಲಿ ತಪ್ಪಿಲ್ಲ, ಆದರೆ....: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
ಲವ್ ಜಿಹಾದ್ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಹಾಗೂ ಬಲವಂತವಾಗಿ ಮತಾಂತರಗೊಂಡಿರುವ ಪ್ರಕರಣಗಳ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ.

ನಾಗ್ಪುರ: ಅಂತರಧರ್ಮೀಯ ವಿವಾಹವಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸುಳ್ಳು ಗುರುತಿನ ಮೂಲಕ ಬಲವಂತವಾಗಿ ಮತಾಂತರ ಮಾಡಿ ಮದುವೆಯಾಗಿ ವಂಚಿಸುವ ಪ್ರಕರಣಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, 'ಲವ್ ಜಿಹಾದ್'ನ ನೈಜತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತು ಕೇರಳ ಹೈಕೋರ್ಟ್ ಅವಲೋಕನ ಮಾಡಿವೆ. ಬಲವಂತದ ಮತಾಂತರ ಮತ್ತು 'ಲವ್ ಜಿಹಾದ್' ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ ಎಂದು ಹೇಳಿದರು.
ಇದು ವಾಸ್ತವ, ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಮೊದಲಿಗೆ ಮದುವೆಯಾಗಿ, ಮಕ್ಕಳು ಜನಿಸಿದ ನಂತರ ಅವರನ್ನು ಬಿಟ್ಟುಬಿಡುವ ಘಟನೆಗಳು ಹೆಚ್ಚುತ್ತಿವೆ. ಅಂತರಧರ್ಮೀಯ ವಿವಾಹವಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಬಲವಂತದ ಮತಾಂತರ ಪ್ರಕರಣಗಳು ಗಂಭೀರವಾಗಿವೆ. ಇವುಗಳನ್ನು ತಡೆಯುವ ಅಗತ್ಯವಿದೆ ಎಂದು ತಿಳಿಸಿದರು.
ಲವ್ ಜಿಹಾದ್ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ಹಾಗೂ ಬಲವಂತವಾಗಿ ಮತಾಂತರಗೊಂಡಿರುವ ಪ್ರಕರಣಗಳ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ ಎಂದು ಫಡ್ನವಿಸ್ ತಿಳಿಸಿದ್ದಾರೆ.

Love Jihad ಗೆ ಕಡಿವಾಣ: ಉತ್ತರ ಪ್ರದೇಶ, ಮಧ್ಯ ಪ್ರದೇಶದ ನಂತರ ಕಾನೂನು ಜಾರಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ಮುಂದು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


