ದೇಶ

ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ; ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಯೂಟ್ಯೂಬರ್ ಬಂಧನ!

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ; ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಯೂಟ್ಯೂಬರ್ ಬಂಧನ!
ಪ್ರಾತಿನಿಧಿಕ ಚಿತ್ರ
Published On :

ಕೊಚ್ಚಿ: ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ಯೂಟ್ಯೂಬರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಇಲ್ಲಿನ ಕಲಮಸ್ಸೇರಿ ಪೊಲೀಸರು ಶನಿವಾರ ಕೋಯಿಕ್ಕೋಡ್‌ನಿಂದ ಮೊಹಮ್ಮದ್ ನಿಶಾಲ್‌ ಎಂಬಾತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ದೂರಿನ ಪ್ರಕಾರ, ಮಹಿಳೆಯ ಆಕ್ಷೇಪಾರ್ಹ ವಿಡಿಯೋಗಳು ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ ಯೂಟ್ಯೂಬರ್, ಎರಡು ಬಾರಿ ಅತ್ಯಾಚಾರವೆಸಗಿದ್ದಾನೆ.

ಆ ವಿಡಿಯೋಗಳು ಮತ್ತು ಫೋಟೊಗಳನ್ನು ಸಂತ್ರಸ್ತೆಯ ಪತಿಗೂ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಯೂಟ್ಯೂಬರ್‌ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.