ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಅಲ್ಹಾಬಾದಿಯಾ, ಸಮಯ್ ರೈನಾಗೆ ಮಹಾ ಪೊಲೀಸರಿಂದ ಸಮನ್ಸ್
ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಮುಂಬೈ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ ಹಾಗೂ ಹಾಸ್ಯನಟ ಸಮಯ್ ರೈನಾ ಅವರಿಗೆ ಮುಂಬೈ ಸೈಬರ್ ಕ್ರೈಂ ಪೊಲೀಸರು ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆ.
ವರ್ಚುವಲ್ ಮೂಲಕ ತಮ್ಮ ಹೇಳಿಕೆ ದಾಖಲಿಸಿಕೊಳ್ಳಬೇಕು ಎಂಬ ಸಮಯ್ ರೈನಾ ಅವರ ಮನವಿಯನ್ನು ಸೈಬರ್ ಮತ್ತು ಮಾಹಿತಿ ಭದ್ರತಾ ವಿಭಾಗವಾದ ಪೊಲೀಸರು ತಿರಸ್ಕರಿಸಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈನಾ ಅವರ ವೆಬ್ ಶೋ "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನಂತರ ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.
ತಾನು ಅಮೆರಿಕದಲ್ಲಿದ್ದು, ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ತಮ್ಮ ಹೇಳಿಕೆ ದಾಖಲಿಸುವಂತೆ ಮಹಾರಾಷ್ಟ್ರ ಸೈಬರ್‌ಗೆ ರೈನಾ ವಿನಂತಿಸಿದ್ದರು. ಆದರೆ ಅವರ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಹಿಂದೆ, ಮುಂಬೈ ಪೊಲೀಸರು ರೈನಾ ಅವರಿಗೆ ಫೆಬ್ರವರಿ 17ಕ್ಕು ಮುನ್ನ ಖಾರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ವಿದೇಶದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಮಾಹಿತಿ ನೀಡಿದ್ದರು.
ಇನ್ನು ಯೂಟ್ಯೂಬ್‌ನಲ್ಲಿ ಜನಪ್ರಿಯರಾಗಿರುವ ಅಲ್ಹಾಬಾದಿಯಾ ಅವರಿಗೂ ಮಹಾರಾಷ್ಟ್ರ ಪೊಲೀಸರು ನೋಟಿಸ್ ನೀಡಿದ್ದು, ಫೆಬ್ರವರಿ 24 ರಂದು ವಿಚಾರಣಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.
ಈಗ ಫೆಬ್ರವರಿ 24 ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



