ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: NCW ಮುಂದೆ ಹಾಜರಾಗಲು ವಿಫಲ; Youtubers ಗೆ ಮತ್ತೆ ಸಮನ್ಸ್
ವೈಯಕ್ತಿಕ ಸುರಕ್ಷತೆ, ವಿದೇಶ ಪ್ರಯಾಣದ ಬದ್ಧತೆಗಳು ಮತ್ತು ಇತರ ಸವಾಲುಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಯೂಟ್ಯೂಬ್ ರಿಯಾಲಿಟಿ ಶೋ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಯೂಟ್ಯೂಬರ್‌ಗಳು ಹಾಜರಾಗಲು ವಿಫಲವಾಗಿದ್ದು, ಮತ್ತೊಮ್ಮೆ ಸಮನ್ಸ್ ನೀಡಲಾಗಿದೆ.
ರಣವೀರ್ ಅಲ್ಹಾಬಾದಿಯಾ, ಸಮಯ್ ರೈನಾ, ಅಪೂರ್ವ ಮುಖಿಜಾ, ಜಸ್ಪ್ರೀತ್ ಸಿಂಗ್, ಆಶಿಶ್ ಚಂಚಲಾನಿ, ತುಷಾರ್ ಪೂಜಾರಿ, ಸೌರಭ್ ಬೋತ್ರಾ ಮತ್ತು ಬಲರಾಜ್ ಘಾಯ್ ವಿರುದ್ಧ ಮಹಿಳಾ ಆಯೋಗ ಫೆಬ್ರುವರಿ 17 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.
ವೈಯಕ್ತಿಕ ಸುರಕ್ಷತೆ, ಪೂರ್ವ ಪ್ರಯಾಣದ ಬದ್ಧತೆಗಳು ಮತ್ತು ಇತರ ಲಾಜಿಸ್ಟಿಕ್ ಸವಾಲುಗಳ ಮೇಲಿನ ಕಳವಳಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.
ಕೊಲೆ ಬೆದರಿಕೆಗಳನ್ನು ಉಲ್ಲೇಖಿಸಿ ರಣವೀರ್ ಅಲ್ಹಾಬಾದಿಯಾ ಅವರು ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡುವಂತೆ ವಿನಂತಿಸಿದ್ದಾರೆ. ಹೀಗಾಗಿ, ಆಯೋಗವು ತನ್ನ ವಿಚಾರಣೆಯನ್ನು ಮಾರ್ಚ್ 6 ಕ್ಕೆ ನಿಗದಿ ಮಾಡಿದೆ. ಸುರಕ್ಷತೆಯ ಕಾಳಜಿಯನ್ನು ವ್ಯಕ್ತಪಡಿಸಿದ ಮುಖಿಜಾ ಅವರ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮರುನಿಗದಿ ಮಾಡಲಾಗಿದೆ.
ಸಮಯ್ ರೈನಾ ಅವರು ಪೂರ್ವ ನಿಗದಿಯಂತೆ ಸದ್ಯ ಅಮೆರಿಕದಲ್ಲಿದ್ದು, ಅಲ್ಲಿಂದ ಹಿಂತಿರುಗಿದ ಬಳಿಕ ಎನ್‌ಸಿಡಬ್ಲ್ಯು ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಹೀಗಾಗಿ, ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ. ಜಸ್ಪ್ರೀತ್ ಸಿಂಗ್ ಕೂಡ ಸದ್ಯ ಪ್ಯಾರಿಸ್ ಪ್ರವಾಸದಲ್ಲಿದ್ದು, ಮಾರ್ಚ್ 10ರೊಳಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಲಾಗಿದೆ.
ಅನಾರೋಗ್ಯದ ಕಾರಣಕ್ಕಾಗಿ ಚಂಚಲಾನಿ ಅವರ ಪರವಾಗಿ ವಕೀಲರು ಹಾಜರಾಗಿದ್ದರು. ಅವರಿಗೂ ಮಾರ್ಚ್ 6 ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಈಮಧ್ಯೆ, ಸಮನ್ಸ್‌ಗೆ ಪ್ರತಿಕ್ರಿಯಿಸದ ತುಷಾರ್ ಪೂಜಾರಿ, ಸೌರಭ್ ಬೋತ್ರಾ ವಿರುದ್ಧ ಕಿಡಿಕಾರಿದ ಆಯೋಗವು, ಅವರಿಗೂ ಮಾರ್ಚ್ 6ಕ್ಕೆ ಹಾಜರಾಗುವಂತೆ ಸೂಚಿಸಿದೆ. ಬಲರಾಜ್ ಘಾಯ್ ಅವರು ಸದ್ಯ ವಿದೇಶದಲ್ಲಿದ್ದು, ಅಲ್ಲಿಂದ ಹಿಂದಿರುಗಿದ ನಂತರ ಮಾರ್ಚ್ 11 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



