ದೇಶ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ; ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದೆ: ಮಾಲಿನ್ಯ ನಿಯಂತ್ರಣ ಮಂಡಳಿ

ಪ್ರಯಾಗ್‌ರಾಜ್ ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ಇದು ಸ್ನಾನಕ್ಕೆ ಯೋಗ್ಯವಲ್ಲ ಎಂದು ಸ್ವತಃ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ; ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದೆ: ಮಾಲಿನ್ಯ ನಿಯಂತ್ರಣ ಮಂಡಳಿ
ಪ್ರಯಾಗ್‌ರಾಜ್
Published On :

ಲಖನೌ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇದುವರೆಗೂ 54 ಕೋಟಿ ಜನರು ಪುಣ್ಯಸ್ನಾನ ಮಾಡಿದ್ದಾರೆ. ನಿತ್ಯ ಲಕ್ಷಾಂತರ ಜನ ಗಂಗಾ ನದಿಯಲ್ಲಿ ಮಿಂದೇಳುತ್ತಿದ್ದಾರೆ. ಪವಿತ್ರ ಮಹಾಕುಂಭಮೇಳ ನಡೆಯುತ್ತಿರುವ ಮಧ್ಯೆ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

ಪ್ರಯಾಗ್‌ರಾಜ್ ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ಇದು ಸ್ನಾನಕ್ಕೆ ಯೋಗ್ಯವಲ್ಲ ಎಂದು ಸ್ವತಃ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಜನವರಿ 12, 13ರಂದೇ ಗಂಗಾ ನದಿಯ ನೀರಿನ ಸ್ಯಾಂಪಲ್‌ ತೆಗೆದುಕೊಂಡು ಪರೀಕ್ಷೆ ನಡೆಸಿತ್ತು. ಇದೀಗ ನೀರಿನ ಸ್ಯಾಂಪಲ್ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ(NGT) ಸಲ್ಲಿಕೆ ಮಾಡಿದೆ.

ಗಂಗಾ ನದಿಯ ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇವೆ. ನೀರಿನ ಬಯೋಕೆಮಿಕಲ್ ಆಕ್ಸಿಜನ್ ಡಿಮ್ಯಾಂಡ್ ಸ್ನಾನಕ್ಕೆ ಯೋಗ್ಯವಾಗಿಲ್ಲ. ಕುಂಭಮೇಳದಲ್ಲಿ ಕೋಟಿಗಟ್ಟಲೆ ಜನರು ಸ್ನಾನ ಮಾಡುವುದರಿಂದ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಹೆಚ್ಚಾಗುತ್ತೆ ಎಂದು ವರದಿಯಲ್ಲಿ ಹೇಳಲಾಗಿದೆ.

ನಾಳೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ಬಗ್ಗೆ ಎನ್‌ಜಿಟಿಯಲ್ಲಿ ವಿಸ್ತೃತ ವಿಚಾರಣೆ ನಡೆಯಲಿದೆ.

ಈ ಮಧ್ಯೆ, 2025 ರ ಮಹಾಕುಂಭಕ್ಕೆ ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟವನ್ನು ಸುಧಾರಿಸುವ ಕುರಿತು 'ಕ್ರಮ ಕೈಗೊಂಡ ವರದಿ(ATR)' ಸಲ್ಲಿಸಲು ವಿಫಲವಾದ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ(UPPCB)ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಸಮನ್ಸ್ ಜಾರಿ ಮಾಡಿದ್ದು, ವರ್ಚುವಲ್ ಮೂಲಕ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಧಾರ್ಮಿಕ ಸಮ್ಮೇಳನದ ವೇಳೆ ಗಂಗಾ ನದಿ ನೀರಿನ ಗುಣಮಟ್ಟ ಕಾಪಾಡಲು ಹಿಂದಿನಿಂದಲೂ ಎನ್‌ಜಿಟಿ ಸೂಚನೆ ನೀಡಿತ್ತು. ನೀರಿನ ಗುಣಮಟ್ಟ, ತ್ಯಾಜ್ಯ ನೀರಿನ ಶುದ್ದೀಕರಣ, ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ ಕೇಳಿದೆ. ನಾಳಿನ ವಿಚಾರಣೆಗೆ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಹಾಜರಿಗೆ ಸಮನ್ಸ್ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.