ದೇಶ

ಸಂಗಮ್ 'ನೀರು ಕುಡಿಯಲು ಯೋಗ್ಯ': ಮಲ ಬ್ಯಾಕ್ಟೀರಿಯಾ ವರದಿ ತಿರಸ್ಕರಿಸಿದ ಯೋಗಿ

ಪ್ರಯಾಗ್‌ರಾಜ್ ನ ಸಂಗಮದಲ್ಲಿನ ನೀರು "ಕುಡಿಯಲು ಯೋಗ್ಯವಾಗಿದೆ" ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸಂಗಮ್ 'ನೀರು ಕುಡಿಯಲು ಯೋಗ್ಯ': ಮಲ ಬ್ಯಾಕ್ಟೀರಿಯಾ ವರದಿ ತಿರಸ್ಕರಿಸಿದ ಯೋಗಿ
ಸಂಗಮದಲ್ಲಿ ಯೋಗಿ ಆದಿತ್ಯನಾಥ್ ಪುಣ್ಯ ಸ್ನಾನದ ಚಿತ್ರ
Published On :

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿರುವ ಹಲವು ಸ್ಥಳಗಳ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಹೆಚ್ಚಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂಬ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರಸ್ಕರಿಸಿದ್ದಾರೆ ಎಂದು NDTV ವರದಿ ಮಾಡಿದೆ.

ಪ್ರಯಾಗ್‌ರಾಜ್ ನ ಸಂಗಮದಲ್ಲಿನ ನೀರು "ಕುಡಿಯಲು ಯೋಗ್ಯವಾಗಿದೆ" ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಹಾಕುಂಭಮೇಳದಲ್ಲಿ ಇದುವರೆಗೂ 54 ಕೋಟಿ ಜನ ಪುಣ್ಯಸ್ನಾನ ಮಾಡಿದ್ದಾರೆ ಮತ್ತು ನಿತ್ಯ ಲಕ್ಷಾಂತರ ಜನ ಗಂಗಾ ನದಿಯಲ್ಲಿ ಮಿಂದೇಳುತ್ತಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಮತ್ತು ಯಮುನಾ ನದಿಗೆ ಸಂಸ್ಕರಿಸದ ಕೊಳಚೆನೀರನ್ನು ಬಿಡಲಾಗಿದೆ ಎಂಬ ಆರೋಪದ ವಿಚಾರಣೆಯ ಸಂದರ್ಭದಲ್ಲಿ, ಮಹಾಕುಂಭದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದ ಮಲ ಬ್ಯಾಕ್ಟೀರಿಯಾ ಮತ್ತು ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇವೆ. ನೀರಿನ ಬಯೋಕೆಮಿಕಲ್ ಆಕ್ಸಿಜನ್ ಡಿಮ್ಯಾಂಡ್ ಸ್ನಾನಕ್ಕೆ ಯೋಗ್ಯವಾಗಿಲ್ಲ. ಕುಂಭಮೇಳದಲ್ಲಿ ಕೋಟಿಗಟ್ಟಲೆ ಜನರು ಸ್ನಾನ ಮಾಡುವುದರಿಂದ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಹೆಚ್ಚಾಗುತ್ತೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ವರದಿಯಲ್ಲಿ ಹೇಳಿದೆ.

ಜನವರಿ 12 ಮತ್ತು 13 ರಂದು ನಡೆದ ನೀರಿನ ಗುಣಮಟ್ಟದ ಮೇಲ್ವಿಚಾರಣೆಯ ಫಲಿತಾಂಶಗಳು ಈ ನೀರು ಕುಡಿಯುವುದಕ್ಕಾಗಲಿ, ಸ್ನಾನ ಮಾಡುವುದಕ್ಕಾಗಲಿ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) NGT ಗೆ ವರದಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.