ದೇಶ

ಕುಂಭ ಮೇಳ 'ಮುಕ್ತಿ ಮೇಳ': ಸಿಎಂ ಮಮತಾ ಬ್ಯಾನರ್ಜಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ತಿರುಗೇಟು!

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರ ಸಾವನ್ನು ಉಲ್ಲೇಖಿಸಿ ಮಹಾ ಕುಂಭ ಮೇಳವನ್ನು ಮೃತ್ಯುಕುಂಭ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಕುಂಭ ಮೇಳ 'ಮುಕ್ತಿ ಮೇಳ': ಸಿಎಂ ಮಮತಾ ಬ್ಯಾನರ್ಜಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ತಿರುಗೇಟು!
ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್, ಸಿಎಂ ಮಮತಾ ಬ್ಯಾನರ್ಜಿ
Published On :

ಕೊಲ್ಕತ್ತಾ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು 'ಮುಕ್ತಿ ಮೇಳ' ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಗುರುವಾರ ಹೇಳಿದ್ದಾರೆ. ಈ ಮೂಲಕ ಕುಂಭ ಮೇಳ ಮೃತ್ಯುಕುಂಭ ಎಂದಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾಲ್ತುಳಿತದಲ್ಲಿ 18 ಜನರ ಸಾವನ್ನು ಉಲ್ಲೇಖಿಸಿ ಮಹಾ ಕುಂಭ ಮೇಳವನ್ನು ಮೃತ್ಯುಕುಂಭ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ಈ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಪಾಲರು, ಕುಂಭ ಮೇಳ ಆಚರಣೆಯಲ್ಲಿ ವಿನಮ್ರನಾಗಿ ಪಾಲ್ಗೊಳ್ಳಲು ಅಲ್ಲಿಗೆ ಹೋಗಿದ್ದೆ. ಕುಂಭ ಮೇಳ ಮುಕ್ತಿ ಮೇಳ, ಮೃತ್ಯುಂಜಯ ಮೇಳ ಎಂದು ಬಣ್ಣಿಸಿದರು. ಆನಂದ್ ಬೋಸ್ ಅವರು ಕೂಡಾ ಪ್ರಯಾಗ್ ರಾಜ್ ಗೆ ತೆರಳಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು.

"ನಿಮಗೆ ಗೊತ್ತಾ, ಕುಂಭಮೇಳವನ್ನು ಭಾರತ ಹೊಂದಿರುವ ಶ್ರೇಷ್ಠ ಸಂಪ್ರದಾಯದ ಪ್ರತೀಕವಾಗಿ ನೋಡುತ್ತೇನೆ. ಕುಂಭವು ದೇವರೊಂದಿಗಿನ ಸಹಭಾಗಿತ್ವವಾಗಿದೆ. ಜನಸಾಮಾನ್ಯರು ಸ್ವಯಂ ಪ್ರೇರಣೆಯಿಂದ ಅಲ್ಲಿಗೆ ಬರುತ್ತಿದ್ದಾರೆ.

ಲಕ್ಷ ಲಕ್ಷ ಜನ ತಾವಾಗಿಯೇ ಅಲ್ಲಿಗೆ ಬಂದಿದ್ದರು. ಇದು ಆಕಾಶದೊಂದಿಗೆ ಭೂಮಿ, ದೇವರೊಂದಿಗೆ ಮಾನವ ಮತ್ತು ಆಂತರಿಕ ಪ್ರಪಂಚವನ್ನು ಬಾಹ್ಯ ಪ್ರಪಂಚದೊಂದಿಗೆ ಸಂಪರ್ಕಿಸುವ ಕಾಮನಬಿಲ್ಲಿನ ಸೇತುವೆ. ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯ ಶ್ರೇಷ್ಠತೆ ಎಂದು ಭಾವಿಸುತ್ತೇನೆ ಎಂದರು.

ಯಾವುದೇ ವಿವಾದ ಹುಟ್ಟಿಕೊಳ್ಳಲು ನಾನು ಬಯಸುವುದಿಲ್ಲ. ಇದು ಪ್ರಜಾಸತ್ತಾತ್ಮಕ ವ್ಯವಸ್ಥೆ. ಯಾವುದೇ ಪರಿಸ್ಥಿತಿ ಬಗ್ಗೆ ತನ್ನದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಮುಖ್ಯಮಂತ್ರಿ ಅರ್ಹರಿದ್ದಾರೆ. ಇಂತಹ ಪ್ರಜಾಪ್ರಭುತ್ವದ ಸೌಂದರ್ಯನನ್ನು ನಾನು ಸ್ವಾಗತಿಸುತ್ತೇನೆ. ಆದರೆ, ರಾಜ್ಯಪಾಲನಾಗಿ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ರಾಜಕೀಯ ಹೇಳಿಕೆಗಳಿಗೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.