ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿತ್ತು: ಮಾಯಾವತಿ
"ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ".

ಲಖನೌ: ಇತ್ತೀಚಿಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ 'ಬಿ' ಟೀಮ್ ಆಗಿ ಸ್ಪರ್ಧಿಸಿತ್ತು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು ಶುಕ್ರವಾರ ತಮ್ಮ ಪಕ್ಷದ ಪ್ರಸ್ತುತ ರಾಜಕೀಯ ವಿಧಾನವನ್ನು ಪ್ರಶ್ನಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ್ದಾರೆ.
ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸೇರದಿರುವುದರಿಂದ ನಿರಾಶೆಗೊಂಡಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಯಾವತಿ, "ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಆಗಿ ಹೋರಾಡಿತು, ಇದರಿಂದಾಗಿ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬಂದಿತು ಎಂಬುದು ಸಾಮಾನ್ಯ ಚರ್ಚೆಯಾಗಿದೆ" ಎಂದು ಟೀಕಿಸಿದ್ದಾರೆ.
"ಇಲ್ಲದಿದ್ದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಹೆಚ್ಚಿನ ಅಭ್ಯರ್ಥಿಗಳು ಠೇವಣಿಯನ್ನು ಸಹ ಉಳಿಸಿಕೊಳ್ಳಲು ಸಾಧ್ಯವಾಗದಂತಹ ಕೆಟ್ಟ ಸ್ಥಿತಿಯಲ್ಲಿರುತ್ತಿರಲಿಲ್ಲ" ಎಂದು ಮಾಜಿ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದ್ದಾರೆ.
ಇತರರ ಕಡೆಗೆ ಬೆರಳು ತೋರಿಸುವ ಮೊದಲು, ಅವರು ಖಂಡಿತವಾಗಿಯೂ ತಮ್ಮದೇ ಆದ ವ್ಯವಹಾರಗಳನ್ನು ನೋಡಿಕೊಳ್ಳಬೇಕು ಎಂದು ಮಾಯಾವತಿ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿರುವ ಹೊಸ ಬಿಜೆಪಿ ಸರ್ಕಾರಕ್ಕೆ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುವ ಸವಾಲು ಇದೆ ಎಂದು ಮಾಯಾವತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



