Maha Kumbh: ಸಂಗಮದ ನೀರು ಕುಡಿದು ತೋರಿಸಿ; ವರದಿ ನಿರಾಕರಿಸಿದ ಯೋಗಿಗೆ ಗಾಯಕ ವಿಶಾಲ್ ದದ್ಲಾನಿ ಸವಾಲು
ದ್ವೇಷಿಸುವವರ ಬಗ್ಗೆ ಚಿಂತಿಸಬೇಡಿ. ನಾವು ನಿಮ್ಮನ್ನು ನಂಬುತ್ತೇವೆ, ದಯವಿಟ್ಟು ತ್ರಿವೇಣಿ ಸಂಗಮಕ್ಕೆ ತೆರಳಿ ಅಲ್ಲಿ ಕ್ಯಾಮೆರಾದ ಮುಂದೆ ಸಂಗಮದ ನೀರನ್ನು ಕುಡಿದು ಜನರಿಗೆ ತೋರಿಸಿ.

ಲಖನೌ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿರುವ ಹಲವು ಸ್ಥಳಗಳ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಹೆಚ್ಚಾಗಿದ್ದು, ಸ್ನಾನಕ್ಕೆ ಯೋಗ್ಯವಲ್ಲ ಎಂಬ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯನ್ನು ನಿರಾಕರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಂಗಮದ ನೀರು ಕುಡಿದು ತೋರಿಸುವಂತೆ ಬಾಲಿವುಡ್ ಖ್ಯಾತ ಗಾಯಕ ವಿಶಾಲ್ ದದ್ಲಾನಿ ಅವರು ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್, ದ್ವೇಷಿಸುವವರ ಬಗ್ಗೆ ಚಿಂತಿಸಬೇಡಿ. ನಾವು ನಿಮ್ಮನ್ನು ನಂಬುತ್ತೇವೆ, ದಯವಿಟ್ಟು ತ್ರಿವೇಣಿ ಸಂಗಮಕ್ಕೆ ತೆರಳಿ ಅಲ್ಲಿ ಕ್ಯಾಮೆರಾದ ಮುಂದೆ ಸಂಗಮದ ನೀರನ್ನು ಕುಡಿದು ಜನರಿಗೆ ತೋರಿಸಿ ಎಂದು ಸವಾಲು ಹಾಕಿದ್ದಾರೆ.
ಜನವರಿಯಲ್ಲಿ ಆರಂಭಗೊಂಡ ಮಹಾಕುಂಭ ಮೇಳಕ್ಕೆ ಈಗಾಗಲೇ ಕೋಟ್ಯಾಂತರ ಮಂದಿ ಬಂದು ಇಲ್ಲಿನ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ಅಲ್ಲದೆ ಪ್ರತಿ ದಿನ ಲಕ್ಷಾಂತರ ಮಂದಿ ಇಲ್ಲಿನ ಸಂಗಮದಲ್ಲಿ ಪವಿತ್ರ ಮಾಡುತ್ತಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಗಂಗಾ ಮತ್ತು ಯಮುನಾ ನದಿಗೆ ಸಂಸ್ಕರಿಸದ ಕೊಳಚೆನೀರನ್ನು ಬಿಡಲಾಗಿದೆ ಎಂಬ ಆರೋಪದ ವಿಚಾರಣೆಯ ಸಂದರ್ಭದಲ್ಲಿ, ಮಹಾಕುಂಭದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದ ಮಲ ಬ್ಯಾಕ್ಟೀರಿಯಾ ಮತ್ತು ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇವೆ. ನೀರಿನ ಬಯೋಕೆಮಿಕಲ್ ಆಕ್ಸಿಜನ್ ಡಿಮ್ಯಾಂಡ್ ಸ್ನಾನಕ್ಕೆ ಯೋಗ್ಯವಾಗಿಲ್ಲ. ಕುಂಭಮೇಳದಲ್ಲಿ ಕೋಟಿಗಟ್ಟಲೆ ಜನರು ಸ್ನಾನ ಮಾಡುವುದರಿಂದ ಫೆಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಹೆಚ್ಚಾಗುತ್ತೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ವರದಿಯಲ್ಲಿ ಹೇಳಿದೆ.
ಜನವರಿ 12 ಮತ್ತು 13 ರಂದು ನಡೆದ ನೀರಿನ ಗುಣಮಟ್ಟದ ಮೇಲ್ವಿಚಾರಣೆಯ ಫಲಿತಾಂಶಗಳು ಈ ನೀರು ಕುಡಿಯುವುದಕ್ಕಾಗಲಿ, ಸ್ನಾನ ಮಾಡುವುದಕ್ಕಾಗಲಿ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) NGT ಗೆ ವರದಿ ಸಲ್ಲಿಸಿದೆ. ಈ ವರದಿಯನ್ನು ಯೋಗಿ ಆದಿತ್ಯನಾಥ್ ಅವರು ನಿರಾಕರಿಸಿದ್ದಾರೆ. ಪ್ರಯಾಗ್‌ರಾಜ್ ನ ಸಂಗಮದಲ್ಲಿನ ನೀರು "ಕುಡಿಯಲು ಯೋಗ್ಯವಾಗಿದೆ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



