ಮಹಾಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರಿಂದ ಪವಿತ್ರ ಸ್ನಾನ: ಯುಪಿ ಸರ್ಕಾರ
ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ.

ಲಖನೌ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.
ಜನವರಿ 13 ರಂದು ಪ್ರಾರಂಭವಾದ ಕುಂಭಮೇಳಕ್ಕೆ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗರಾಜ್ ಗೆ ಭಕ್ತರ ದಂಡೇ ಹರಿದು ಬರುತ್ತಿದೆ. 144 ವರ್ಷಗಳಿಗೊಮ್ಮೆ ನಡೆಯುವ ಕುಂಭ ಮೇಳೆ ಕಣ್ತುಂಬಿಕೊಳ್ಳಬೇಕು ಎಂಬುದು ಬಹುತೇಕರ ಆಶಯ.
ಭಾರತದ 110 ಕೋಟಿ ಸನಾತನ ಅನುಯಾಯಿಗಳಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಮತ್ತು ಫೆಬ್ರವರಿ 26 ರಂದು ನಡೆಯುವ ಅಂತಿಮ 'ಅಮೃತ ಸ್ನಾನ'ದ ವೇಳೆಗೆ ಈ ಸಂಖ್ಯೆ 65 ಕೋಟಿಯನ್ನು ಮೀರುವ ನಿರೀಕ್ಷೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈ ಮಹಾ ಕುಂಭವು ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಜನರ ಭಾಗವಹಿಸುವಿಕೆಯನ್ನು ದಾಖಲಿಸಿದೆ ಎಂದು ಉತ್ತರ ಪ್ರದೇಶ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



