ದೇಶ

ಅಸ್ಸಾಂ ಪೊಲೀಸರಿಂದ ಮೇಘಾಲಯ ಕುಲಪತಿ ಮಹಬೂಬುಲ್ ಹಕ್ ಬಂಧನ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೆಹಬೂಬುಲ್ ಹಕ್ ಅವರನ್ನು ಗುರಿಯಾಗಿಸಿ ಹಲವು ಬಾರಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಸ್ಸಾಂ ಪೊಲೀಸರಿಂದ ಮೇಘಾಲಯ ಕುಲಪತಿ ಮಹಬೂಬುಲ್ ಹಕ್ ಬಂಧನ
ಮಹಬೂಬುಲ್ ಹಕ್
Published On :

ಗುವಾಹಟಿ: ಮೇಘಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಹ್ಬೂಬುಲ್ ಹಕ್ ಅವರನ್ನು ಅಸ್ಸಾಂ ಪೊಲೀಸರು ಗುವಾಹಟಿಯಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೆಹಬೂಬುಲ್ ಹಕ್ ಅವರನ್ನು ಗುರಿಯಾಗಿಸಿ ಹಲವು ಬಾರಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ(STF) ಜಂಟಿ ತಂಡ ಅವರನ್ನುಬಂಧಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಿಬಿಎಸ್‌ಇ 12ನೇ ತರಗತಿಯ ಭೌತಶಾಸ್ತ್ರ ಪರೀಕ್ಷೆಯ ಸಮಯದಲ್ಲಿ ಅಕ್ರಮ ವಿಧಾನಗಳನ್ನು ಸುಗಮಗೊಳಿಸುವ ಸಲುವಾಗಿ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.

ಆದಾಗ್ಯೂ, ನಾರ್ತ್‌ಈಸ್ಟ್ ನ್ಯೂಸ್ ಪ್ರಕಾರ, ಹಕ್ ಅವರನ್ನು ಏಕೆ ಬಂಧಿಸಲಾಗಿದೆ ಎಂಬುದಕ್ಕೆ ನಿಖರವಾದ ಕಾರಣವನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಒಟ್ಟು 274 ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿದುಬಂದಿದೆ. ಇದರಲ್ಲಿ 45 ವಿದ್ಯಾರ್ಥಿಗಳು ಶಾಲೆಯಿಂದ ಮತ್ತು 214 ವಿದ್ಯಾರ್ಥಿಗಳು ERD ಗ್ರೂಪ್‌ನಿಂದ ಬಂದಿದ್ದಾರೆ. ಹಣಕ್ಕೆ ಬದಲಾಗಿ ERD ಗ್ರೂಪ್ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಸಹಾಯ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.