ದೇಶ

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ ಕೈದಿಯಿಂದ ಕೊಲೆ ಬೆದರಿಕೆ!

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ  ಕೈದಿಯಿಂದ ಕೊಲೆ ಬೆದರಿಕೆ!
ರಾಜಸ್ಥಾನ ಸಿಎಂ ಭಜನಲ್ ಲಾಲ್ ಶರ್ಮಾ
Published On :

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾಗೆ ಕೊಲೆ ಬೆದರಿಕೆ ಬಂದಿದೆ. ಶುಕ್ರವಾರ ರಾತ್ರಿ ದೌಸಾದ ಸಲಾವಾಸ್ ಜೈಲಿನಿಂದ ಕೈದಿಯೊಬ್ಬ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಬೆಳಗ್ಗೆ 3ರಿಂದ 7ರವರೆಗೆ ಜೈಲಿನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಿಂದ ಫೋನ್ ವಶಪಡಿಸಿಕೊಳ್ಳಲಾಗಿದೆ,. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.