ದೇಶ

ಕಾಶ್ಮೀರ: ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ

ಸುಂದರ್‌ಬನಿ ಸೆಕ್ಟರ್‌ನ ಫಾಲ್ ಗ್ರಾಮದ ಬಳಿ ನಡೆದ ಅಲ್ಪಾವಧಿ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಕಾಶ್ಮೀರ: ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ
ಸಾಂದರ್ಭಿಕ ಚಿತ್ರ
Published On :

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯ ಹಳ್ಳಿಯೊಂದರಲ್ಲಿ ಬುಧವಾರ ಸೇನಾ ವಾಹನದ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಂದರ್‌ಬನಿ ಸೆಕ್ಟರ್‌ನ ಫಾಲ್ ಗ್ರಾಮದ ಬಳಿ ನಡೆದ ಅಲ್ಪಾವಧಿ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಕಾಡಿನಲ್ಲಿ ಅಡಗಿಕೊಂಡಿದ್ದ ಶಂಕಿತ ಭಯೋತ್ಪಾದಕರು, ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದ ಸೇನಾ ವಾಹನದ ಮೇಲೆ ಕೆಲವು ಸುತ್ತು ಗುಂಡು ಹಾರಿಸಿದರು.

ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.