ದೇಶ

ಅಸ್ಸಾಂನಲ್ಲಿ 5.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ

ಅಸ್ಸಾಂನ ಕೇಂದ್ರ ಭಾಗದಲ್ಲಿ ಅಷ್ಟೇ ಅಲ್ಲದೆ, ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಭೂಕಂಪನಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ 5.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನತೆ
ಸಂಗ್ರಹ ಚಿತ್ರ
Published On :

ಗುವಾಹಟಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಭೂಕಂಪನಕ್ಕೆ ಜನರು ಬಿಚ್ಚಿಬಿದ್ದಾರೆ.

ಅಸ್ಸಾಂನ ಕೇಂದ್ರ ಭಾಗದಲ್ಲಿ ಅಷ್ಟೇ ಅಲ್ಲದೆ, ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಭೂಕಂಪನಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

ಭೂಕಂಪದಿಂದ ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿಗಳಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪವು ಭೂಮಿಯ 16 ಕಿಲೋಮೀಟರ್ ಆಳದಲ್ಲಿ ಆಗಿದ್ದು, ತಡರಾತ್ರಿ ಸುಮಾರು 2:25 ಗಂಟೆಗೆ ಈ ಕಂಪನ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಗುವಾಹಟಿಯಿಂದ ಪೂರ್ವಕ್ಕೆ 52 ಕಿ.ಮೀ ದೂರದಲ್ಲಿ ದಾಖಲಾಗಿದೆ.

ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್ಪಾರಾ ಜಿಲ್ಲೆಗಳ ಜನರಿಗೂ ಕಂಪನದ ಅನುಭವವಾಗಿದೆ.

ದರ್ರಾಂಗ್, ತಮುಲ್‌ಪುರ್, ಸೋನಿತ್‌ಪುರ್, ಕಮ್ರೂಪ್, ಬಿಸ್ವನಾಥ್, ಉದಲ್‌ಗುರಿ, ನಲ್ಬರಿ, ಬಜಾಲಿ, ಬರ್ಪೇಟಾ, ಬಕ್ಸಾ, ಚಿರಾಂಗ್, ಕೊಕ್ರಜಾರ್, ಬೊಂಗೈಗಾಂವ್ ಮತ್ತು ಬ್ರಹ್ಮಪುತ್ರದ ಉತ್ತರ ದಂಡೆಯಲ್ಲಿರುವ ಲಖಿಂಪುರದಲ್ಲೂ ಕಂಪನದ ಅನುಭವವಾಗಿದೆ.

ಮಧ್ಯ-ಪಶ್ಚಿಮ ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳು, ಸಂಪೂರ್ಣ ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ.

ಮಧ್ಯ-ಪೂರ್ವ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಭಾಗಗಳಲ್ಲೂ ಭೂಕಂಪ ಆಗಿದೆ ಎಂದು ವರದಿ ತಿಳಿಸಿದೆ. ಭೂಮಿ ಕಂಪಿಸಿದ್ದರಿಂದ ಮನೆಯ ಒಳಾಂಗಣ ವಸ್ತುಗಳು ಅಲುಗಾಡಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಈಶಾನ್ಯ ಭಾರತವು ಭೂಕಂಪನ ವಲಯದಲ್ಲಿ ಬರುತ್ತದೆ. ಇದರಿಂದಾಗಿ ಈ ಪ್ರದೇಶದಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.