ಪ್ರಧಾನಿ ಮೋದಿ ಪದವಿ ವಿವಾದ: ತೀರ್ಪ ಕಾಯ್ದಿರಿಸಿದ ದೆಹಲಿ ಹೈಕೋರ್ಟ್
"ವಾದ, ಪ್ರತಿವಾದಗಳನ್ನು ಆಲಿಸಲಾಗಿದೆ. ತೀರ್ಪು ಕಾಯ್ದಿರಿಸಲಾಗಿದೆ" ಎಂದು ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಮೂರ್ತಿ ಸಚಿನ್ ದತ್ತ ಅವರು ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ(ಸಿಐಸಿ) ನೀಡಿದ್ದ ಆದೇಶ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿದೆ.
"ವಾದ, ಪ್ರತಿವಾದಗಳನ್ನು ಆಲಿಸಲಾಗಿದೆ. ತೀರ್ಪು ಕಾಯ್ದಿರಿಸಲಾಗಿದೆ" ಎಂದು ಕಕ್ಷಿದಾರರ ವಾದ ಆಲಿಸಿದ ನಂತರ ನ್ಯಾಯಮೂರ್ತಿ ಸಚಿನ್ ದತ್ತ ಅವರು ಹೇಳಿದ್ದಾರೆ.
ಸಿಐಸಿಯ ಆದೇಶವನ್ನು ರದ್ದುಗೊಳಿಸಲು ಅರ್ಹವಾಗಿದೆ ಎಂದು ದೆಹಲಿ ವಿವಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.
ಆದಾಗ್ಯೂ, ದಾಖಲೆಯನ್ನು ನ್ಯಾಯಾಲಯಕ್ಕೆ ತೋರಿಸುವುದಕ್ಕೆ ದೆಹಲಿ ವಿವಿ ಯಾವುದೇ ಆಕ್ಷೇಪಣೆ ವ್ಯಕ್ತಪಡಿಸಿಲ್ಲ ಎಂದು ಮೆಹ್ತಾ ಹೇಳಿದ್ದಾರೆ.
"ವಿಶ್ವವಿದ್ಯಾಲಯವು ದಾಖಲೆಯನ್ನು ನ್ಯಾಯಾಲಯಕ್ಕೆ ತೋರಿಸಲು ಯಾವುದೇ ಆಕ್ಷೇಪಣೆಯನ್ನು ವ್ಯಕ್ತಪಡಿಸಿಲ್ಲ. 1978 ರಲ್ಲಿ ಕಲಾ ಪದವಿ ಪಡೆದಿದ್ದು," ಎಂದು ಮೆಹ್ತಾ ತಿಳಿಸಿದ್ದಾರೆ.
ನೀರಜ್ ಎಂಬವರು ಆರ್‌ಟಿಐ ಅರ್ಜಿ ಸಲ್ಲಿಸಿದ ನಂತರ, ಕೇಂದ್ರ ಮಾಹಿತಿ ಆಯೋಗ(ಸಿಐಸಿ) ಡಿಸೆಂಬರ್ 21, 2016 ರಂದು, 1978 ರಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಬೇಕು ಎಂದು ಆದೇಶಿಸಿತ್ತು. ಇದೇ ವರ್ಷ ಪ್ರಧಾನಿ ಮೋದಿ ಕೂಡ ಉತ್ತೀರ್ಣರಾಗಿದ್ದಾರೆ ಎನ್ನಲಾಗಿದೆ.
ಜನವರಿ 23, 2017 ರಂದು ದೆಹಲಿ ಹೈಕೋರ್ಟ್, ಸಿಐಸಿ ಆದೇಶಕ್ಕೆ ತಡೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



