ದೇಶ

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 9 ಪ್ರಜೆಗಳ ಬಂಧನ

ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 9 ಪ್ರಜೆಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ದೇಶದಲ್ಲಿ ತಂಗಿದ್ದ ಒಂಬತ್ತು ಬಾಂಗ್ಲಾ ಪ್ರಜೆಗಳನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದರೊಂದಿಗೆ ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.

ಬಂಧಿತರಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ಸರಿಯಾದ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದರು. ಆರೋಪಿಗಳು ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆದಿದ್ದಾರೆ. ವಿದೇಶಿಯರ ಕಾಯಿದೆ ಮತ್ತು ಕಾನೂನಿನ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಅವರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.