ದೇಶ

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ

ಹೊಸ ವರ್ಷದ ಮೊದಲ ದಿನ ಸಂಭವಿಸಿದ ಈ ಕಂಪನದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಗುಜರಾತ್‌: ಕಚ್‌ನಲ್ಲಿ ಲಘು ಭೂಕಂಪ; ಒಂದು ವಾರದಲ್ಲಿ ಎರಡನೇ ಬಾರಿ ಕಂಪಿಸಿದ ಭೂಮಿ
ಸಾಂದರ್ಭಿಕ ಚಿತ್ರ
Published On :

ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ಸಂಶೋಧನಾ ಸಂಸ್ಥೆ(ಐಎಸ್‌ಆರ್) ತಿಳಿಸಿದೆ.

ಹೊಸ ವರ್ಷದ ಮೊದಲ ದಿನ ಸಂಭವಿಸಿದ ಈ ಕಂಪನದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಕಂಪನವು ಇಂದು ಬೆಳಗ್ಗೆ 10.24ಕ್ಕೆ ದಾಖಲಾಗಿದೆ. ಅದರ ಕೇಂದ್ರಬಿಂದುವು ಭಚೌದಿಂದ ಈಶಾನ್ಯ ಪೂರ್ವಕ್ಕೆ(NNE) 23 ಕಿಲೋಮೀಟರ್ ದೂರದಲ್ಲಿ ಇದೆ ಎಂದು ಗಾಂಧಿನಗರ ಮೂಲದ ISR ಹೇಳಿದೆ.

ಮೂರು ದಿನಗಳ ಹಿಂದೆ 3.2 ತೀವ್ರತೆಯ ಕಂಪನ ಸೇರಿದಂತೆ ಕಳೆದ ತಿಂಗಳು, ಈ ಪ್ರದೇಶದಲ್ಲಿ 3 ಕ್ಕಿಂತ ಹೆಚ್ಚು ತೀವ್ರತೆಯ ನಾಲ್ಕು ಭೂಕಂಪನಗಳು ದಾಖಲಾಗಿವೆ.

ISR ಪ್ರಕಾರ ಡಿಸೆಂಬರ್ 23 ರಂದು 3.7 ಮತ್ತು ಡಿಸೆಂಬರ್ 7 ರಂದು 3.2 ತೀವ್ರತೆಯ ಕಂಪನ ದಾಖಲಾಗಿದೆ.

ಗುಜರಾತ್ ಹೆಚ್ಚು ಭೂಕಂಪದ ಅಪಾಯದ ಪ್ರದೇಶವಾಗಿದೆ. ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(GSDMA) ಮಾಹಿತಿಯ ಪ್ರಕಾರ ಕಳೆದ 200 ವರ್ಷಗಳಲ್ಲಿ ಒಂಬತ್ತು ಪ್ರಮುಖ ಭೂಕಂಪಗಳು ಸಂಭವಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.