ಈ ಬಾರಿ ಪ್ರಧಾನಿ ಮೋದಿ ಅವಧಿ ಪೂರ್ಣಗೊಳಿಸಲ್ಲ, 2026ರ ಬಳಿಕ NDA ಸರ್ಕಾರ ಇರಲ್ಲ!
2026ರ ಬಳಿಕ ಸರ್ಕಾರ ಎನ್ ಡಿಎ ಸರ್ಕಾರ ಇರಲ್ಲ, ಮೋದಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಅನಿಸುತ್ತಿದೆ.

ಮುಂಬೈ: ಕೇಂದ್ರ ಸರ್ಕಾರದ ಸ್ಥಿರತೆ ಬಗ್ಗೆ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅನುಮಾನ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವಧಿ ಪೂರ್ಣಗೊಳಿಸುವ ಮುನ್ನಾ ಸಂಭಾವ ಅಡ್ಡಿಗಳ ಭವಿಷ್ಯ ನುಡಿದಿದ್ದಾರೆ.
ವಾಣಿಜ್ಯ ನಗರಿ ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2026ರ ಬಳಿಕ ಸರ್ಕಾರ ಎನ್ ಡಿಎ ಸರ್ಕಾರ ಇರಲ್ಲ, ಮೋದಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಅನಿಸುತ್ತಿದೆ ಎಂದರು.
ಕೇಂದ್ರ ಸರ್ಕಾರ ಅಸ್ಥಿರವಾಗಿದ್ದರೆ, ಅದು ಮಹಾರಾಷ್ಟ್ರದ ಮೇಲೂ ಪರಿಣಾಮ ಬೀರಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಹಾಗೂ ರಾಷ್ಟ್ರದಾದ್ಯಂತ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ರಾವತ್ ನೀಡಿರುವ ಈ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಕೇಂದ್ರದಲ್ಲಿ ಅಸ್ಥಿರತೆಯ ಸಂದರ್ಭದಲ್ಲಿ ರಾಜ್ಯದ ಭವಿಷ್ಯದ ರಾಜಕೀಯ ಕುರಿತ ಚರ್ಚೆಯನ್ನು ಹುಟ್ಟಿಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


