ಪರಮಾಣು ವಿಜ್ಞಾನಿ ಆರ್ ಚಿದಂಬರಂ ನಿಧನ
ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.

ನವದೆಹಲಿ: 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಿಜ್ಞಾನಿ ರಾಜಗೋಪಾಲ ಚಿದಂಬರಂ ಅವರು ಶನಿವಾರ ಬೆಳಗ್ಗೆ ನಿಧನರಾದರು. ಅವರಿಗೆ 88 ವರ್ಷ ವರ್ಷ ವಯಸ್ಸಾಗಿತ್ತು.
ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಸುಕಿನ ಜಾವ 3.20 ಕ್ಕೆ ಕೊನೆಯುಸಿರೆಳೆದರು. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.
ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.
ವಿಜ್ಞಾನಿ ಚಿದಂಬರಂ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


