ದೇಶ

ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಗೆ ರೂ. 25,000 ಮೊತ್ತದ ಶ್ಯೂರಿಟಿ ಬಾಂಡ್ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು

ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ರಾಹುಲ್ ಗಾಂಧಿ
Published On :

ಪುಣೆ: ಹಿಂದುತ್ವ ಪ್ರತಿಪಾದಕ ವಿ.ಡಿ. ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದ ಮಾನಹಾನಿ ಕೇಸ್ ನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯವೊಂದು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಗೆ ರೂ. 25,000 ಮೊತ್ತದ ಶ್ಯೂರಿಟಿ ಬಾಂಡ್ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. ಹಿರಿಯ ಕಾಂಗ್ರೆಸ್ ನಾಯಕ ಮೋಹನ್ ಜೋಶಿ ಅವರು ರಾಹುಲ್ ಗಾಂಧಿಗೆ ಶ್ಯೂರಿಟಿ ನೀಡಿದರು.

ನ್ಯಾಯಾಲಯವು ಕಾಂಗ್ರೆಸ್ ನಾಯಕನಿಗೆ ತನ್ನ ಮುಂದೆ ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ನೀಡಿದ್ದು, ಫೆಬ್ರವರಿ 18 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ ಎಂದು ಗಾಂಧಿ ಪರ ವಕೀಲ ಮಿಲಿಂದ್ ಪವಾರ್ ತಿಳಿಸಿದರು. ಸಾವರ್ಕರ್ ಅವರ ಮೊಮ್ಮಗನ ದೂರಿನ ಮೇರೆಗೆ ಈ ಪ್ರಕರಣವನ್ನು ದಾಖಲಿಸಲಾಗಿತ್ತು.

ಮಾರ್ಚ್ 2023 ರಲ್ಲಿ ಲಂಡನ್‌ನಲ್ಲಿ ರಾಹುಲ್ ಗಾಂಧಿ ಮಾಡಿದ್ದ ಭಾಷಣದಲ್ಲಿ ಸಾರ್ವಕರ್ ಬರೆದಿರುವ ಪುಸ್ತಕವೊಂದನ್ನು ಉಲ್ಲೇಖಿಸಿ, ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.