ಕನ್ನೌಜ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಛಾವಣಿ ಕುಸಿತ; 28 ಜನರ ರಕ್ಷಣೆ, ಆರು ಮಂದಿಗೆ ಗಂಭೀರ ಗಾಯ
ಇಲ್ಲಿಯವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇನ್ನೂ ಕೆಲ ಗಂಟೆಗಳಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಲಖನೌ: ಉತ್ತರ ಪ್ರದೇಶದ ಕನ್ನೌಜ್ನ ರೈಲು ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ನಿರ್ಮಾಣ ಹಂತದ ಛಾವಣಿ ಕುಸಿತದಿಂದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಸುಮಾರು 28 ಜನರನ್ನು ರಕ್ಷಿಸಲಾಗಿದೆ. ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನ್ಫುರ ಕಮಿಷನರ್ ಕೆ. ವಿಜಯೇಂದ್ರ ಪಾಂಡಿಯನ್ ತಿಳಿಸಿದ್ದಾರೆ.
ಇಲ್ಲಿಯವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇನ್ನೂ ಕೆಲವು ಗಂಟೆಗಳಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಘಟನಾ ಸ್ಥಳದಲ್ಲಿ ಶ್ವಾನ ದಳದ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ರಾಜ್ಯ ಸಚಿವ ಅಸೀಮ್ ಅರುಣ್ ಪ್ರಕಾರ, 23 ಜನರನ್ನು ರಕ್ಷಿಸಲಾಗಿದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಖನೌಗೆ ರವಾನಿಸಲಾಗಿದೆ.
ನಿಲ್ದಾಣದಲ್ಲಿ ಸೌಂದರ್ಯೀಕರಣ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಅವಘಡ ನಡೆದ ಸಮಯದಲ್ಲಿ ಸುಮಾರು 30–35 ಕಾರ್ಮಿಕರು ಸ್ಥಳದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



