ದೇಶ

ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ; ಪೂರೈಸಲಾಗದ್ದಕ್ಕೆ ಮನನೊಂದು ಅಪ್ಪನೂ ನೇಣಿಗೆ ಶರಣು!

ಮಗನ ಸ್ಮಾರ್ಟ್‌ಫೋನ್ ಆಸೆಯನ್ನು ಈಡೇರಿಸಲು ಸಾಧ್ಯವಾಗದೆ, ರೈತ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅದೇ ಹಗ್ಗದಿಂದಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಸ್ಮಾರ್ಟ್‌ಫೋನ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ; ಪೂರೈಸಲಾಗದ್ದಕ್ಕೆ ಮನನೊಂದು ಅಪ್ಪನೂ ನೇಣಿಗೆ ಶರಣು!
ಸಾಂದರ್ಭಿಕ ಚಿತ್ರ
Published On :

ನಾಂದೇಡ್‌: 16 ವರ್ಷದ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ತಂದೆ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತನಾಗಿರುವ ತಂದೆ ಮಗನ ಆಸೆ ಈಡೇರಿಸಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯ ಬಿಲೋಲಿ ತಹಸಿಲ್‌ನ ಮಿನಕಿಯಲ್ಲಿ ರೈತನೊಬ್ಬ ತನ್ನ ಮಗನಿಗೆ ಸ್ಮಾರ್ಟ್‌ಫೋನ್ ಖರೀದಿಸಲು ಸಾಧ್ಯವಾಗದ ಕಾರಣ ಮಗನೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗನ ಸ್ಮಾರ್ಟ್‌ಫೋನ್ ಆಸೆಯನ್ನು ಈಡೇರಿಸಲು ಸಾಧ್ಯವಾಗದೆ, ರೈತ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಅದೇ ಹಗ್ಗದಿಂದಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ತಂದೆ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಗುರುವಾರ ಬೆಳಗ್ಗೆ ಹತ್ತನೇ ತರಗತಿಯ ವಿದ್ಯಾರ್ಥಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ ತಂದೆ, ಅದೇ ಮರಕ್ಕೆ ತಾನು ನೇಣು ಬಿಗಿದುಕೊಂಡಿದ್ದಾನೆ ಎಂದು TOI ವರದಿ ಮಾಡಿದೆ.

ಮೂರು ಸಹೋದರರಲ್ಲಿ ಕಿರಿಯವನಾದ ಬಾಲಕ ಮಕರ ಸಂಕ್ರಾಂತಿಗೆ ತನ್ನ ಹಾಸ್ಟೆಲ್‌ನಿಂದ ಮನೆಗೆ ಬಂದಿದ್ದ. ತನ್ನ ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಮಾರ್ಟ್‌ಫೋನ್ ಕೊಡಿಸುವಂತೆ ತಂದೆಗೆ ಕೇಳಿಕೊಂಡಿದ್ದ. ಆದರೆ ಹಣದ ಸಮಸ್ಯೆಯಿಂದಾಗಿ ತಂದೆಗೆ ಮೊಬೈಲ್ ಖರೀದಿಸಲು ಸಾಧ್ಯವಾಗಿರಲಿಲ್ಲ.

ಈ ಸಂಬಂಧ ನಾಂದೇಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.