ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ
ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆ ನಡೆಸಿದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಜಿಲ್ಲಾ ಪಡೆಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದರು.
ಕಾರ್ಯಾಚರಣೆಯಲ್ಲಿ 'ಸಮವಸ್ತ್ರ' ಧರಿಸಿದ್ದ ಮೂವರು ನಕ್ಸಲರ ಮೃತದೇಹಗಳೊಂದಿಗೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಈ ವರ್ಷ ಇಲ್ಲಿಯವರೆಗೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 12 ನಕ್ಸಲರ ಹತ್ಯೆಯಾಗಿದೆ.
ಜನವರಿ 6 ರಂದು ನಾರಾಯಣಪುರ-ದಂತೇವಾಡ-ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಮೂರು ದಿನಗಳ ಸುದೀರ್ಘ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಹತರಾಗಿದ್ದಾರೆ. ಇದೇ ದಿನ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಐಇಡಿಯೊಂದಿಗೆ ವಾಹನವನ್ನು ಸ್ಫೋಟಿಸಿದರು. ಈ ವೇಳೆ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದರು.
ಜನವರಿ 9 ರಂದು ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಸಾವಿಗೀಡಾಗಿದ್ದಾರೆ.
ಇದಕ್ಕೂ ಮುನ್ನ ಜನವರಿ 3 ರಂದು ರಾಯ್‌ಪುರ ವಿಭಾಗದಲ್ಲಿ ಬರುವ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರೊಬ್ಬರು ಹತರಾಗಿದ್ದರು.
ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



