ಈ ಬಾರಿಯ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ ಮುಖ್ಯ ಅತಿಥಿ ಸಾಧ್ಯತೆ
ಇಂಡೋನೇಷ್ಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸುವ ನಿರೀಕ್ಷೆಯಿದೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಪಾಲ್ಗೊಳ್ಳುವ ಸಾಧ್ಯತೆಯಿದೆ. 73 ವರ್ಷದ ಮಾಜಿ ಸೇನಾ ಜನರಲ್ ಪ್ರಬೊವೊ ಸುಬಿಯಾಂಟೊ ಅವರು 2024ರ ಅಕ್ಟೋಬರ್ ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಭಾರತ ಭೇಟಿ ಬಳಿಕ ಅವರು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ಯೋಜಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು. ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯನ್ನು ಭಾರತ ಇನ್ನೂ ಔಪಚಾರಿಕವಾಗಿ ಘೋಷಿಸಿಲ್ಲ.
ಇಂಡೋನೇಷ್ಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪ್ರಮುಖ ವಿಚಾರಗಳ ಕುರಿತು ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ, ಇಂಡೋನೇಷ್ಯಾ ಶ್ರೀಮಂತ ಪರಂಪರೆ ಹಂಚಿಕೊಂಡಿವೆ; ಬಾಲಿಯಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಪ್ರತಿ ವರ್ಷ ಭಾರತವು ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ವಿಶ್ವ ನಾಯಕರನ್ನು ಆಹ್ವಾನಿಸುತ್ತದೆ. ಕಳೆದ ವರ್ಷ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿದ್ದರು.2023ರಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್ -ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. COVID-19 ಸಾಂಕ್ರಾಮಿಕದ ದೃಷ್ಟಿಯಿಂದ 2021 ಮತ್ತು 2022 ರಲ್ಲಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಯಾರೂ ಪಾಲ್ಗೊಂಡಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


