ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್: 12 ನಕ್ಸಲರು ಹತ
ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದೆ.

ಬಿಜಾಪುರ: ಛತ್ತೀಸ್ ಗಢದಲ್ಲಿ ಗುರುವಾರ ಮತ್ತೊಂದು ಭೀಕರ ಎನ್ಕೌಂಟರ್ ನಡೆದಿದ್ದು, ಈ ಕಾರ್ಯಾಚರಣೆಯಲ್ಲಿ ಬರೊಬ್ಬರಿ 12 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಹನ್ನೆರಡು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಈ ಪ್ರದೇಶದಲ್ಲಿ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಇಂದು ಬೆಳಿಗ್ಗೆ 9 ಗಂಟೆ ಸುಮಾರಿನಲ್ಲಿ ಎನ್‌ಕೌಂಟರ್ ಸಂಭವಿಸಿದೆ.
ಈ ಕಾರ್ಯಾಚರಣೆಯಲ್ಲಿ ಮೂರು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (DRG), CRPF ನ ಗಣ್ಯ ಅರಣ್ಯ ಯುದ್ಧ ಘಟಕದ ಐದು ಬೆಟಾಲಿಯನ್‌ಗಳು, CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) 229 ನೇ ಬೆಟಾಲಿಯನ್ ಸಿಬ್ಬಂದಿ ಭಾಗವಹಿಸಿದ್ದರು.
ನಕ್ಸಲರ ಇರುವಿಕೆ ಪತ್ತೆಯಾಗುತ್ತಿದ್ದಂತೆಯೇ ಭದ್ರತಾ ಪಡೆಗಳು ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ 12 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇನ್ನು ಈ ತಿಂಗಳು ಬಿಜಾಪುರದಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಇದಾಗಿದ್ದು, ಈ ಹಿಂದೆ ಜನವರಿ 12 ರಂದು, ಜಿಲ್ಲೆಯ ಮದ್ದೇಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಇದೇ ರೀತಿಯ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐದು ನಕ್ಸಲರು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



