ಉತ್ತರ ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ: ಪ್ರವಾಸಿ ಮಹಿಳೆ ಮತ್ತು ತರಬೇತುದಾರ ಸಾವು
ನಿನ್ನೆ ಸಂಜೆ ಕೇರಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಪುಣೆ ನಿವಾಸಿ ಶಿವಾನಿ ಡೇಬಲ್ ಮತ್ತು ಆಕೆಯ ತರಬೇತುದಾರ ನೇಪಾಳ ಪ್ರಜೆ ಸುಮಲ್ ನೇಪಾಳಿ (26ವ) ಸಂಜೆ 5 ಗಂಟೆ ಸುಮಾರಿಗೆ ಕೇರಿ ಪ್ರಸ್ಥಭೂಮಿಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

ಪಣಜಿ: ಉತ್ತರ ಗೋವಾದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗ ಕಂದಕಕ್ಕೆ ಡಿಕ್ಕಿ ಹೊಡೆದು 27 ವರ್ಷದ ಪ್ರವಾಸಿ ಮಹಿಳೆ ಮತ್ತು ಆಕೆಯ ತರಬೇತುದಾರರು ಮೃತಪಟ್ಟ ಘಟನೆ ನಡೆದಿದೆ.
ನಿನ್ನೆ ಸಂಜೆ ಕೇರಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಪುಣೆ ನಿವಾಸಿ ಶಿವಾನಿ ಡೇಬಲ್ ಮತ್ತು ಆಕೆಯ ತರಬೇತುದಾರ ನೇಪಾಳ ಪ್ರಜೆ ಸುಮಲ್ ನೇಪಾಳಿ (26ವ) ಸಂಜೆ 5 ಗಂಟೆ ಸುಮಾರಿಗೆ ಕೇರಿ ಪ್ರಸ್ಥಭೂಮಿಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಹಸ ಕ್ರೀಡಾ ಕಂಪನಿಯೊಂದಿಗೆ ಪ್ಯಾರಾಗ್ಲೈಡಿಂಗ್ ಮಾಡಲು ಡೇಬಲ್ ಹೋದಾಗ ಈ ದುರ್ಘಟನೆ ನಡೆದಿದೆ. ಪ್ಯಾರಾಗ್ಲೈಡರ್ ಬಂಡೆಯಿಂದ ಹಾರಿದ ಕೂಡಲೇ ಕಂದಕಕ್ಕೆ ಬಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾನವ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಕಂಪನಿ ಮಾಲೀಕ ಶೇಖರ್ ರೈಜಾದಾ ವಿರುದ್ಧ ಭಾರತೀಯ ನ್ಯಾಯ ಸಂಹಿತ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಮಾಂಡ್ರೆಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



