ದೇಶ

ಪ್ರಯಾಗ್ ರಾಜ್ ಮಹಾಕುಂಭ ಆರಂಭವಾಗಿ 11 ದಿನ: 9 ಕೋಟಿಗೂ ಅಧಿಕ ಮಂದಿ ಭಾಗಿ

ಉತ್ಸವದ 11 ನೇ ದಿನದ ಇಂದಿನ ಅಂತ್ಯದ ವೇಳೆಗೆ ಒಟ್ಟು ಭಾಗವಹಿಸುವವರ ಸಂಖ್ಯೆ 100 ಮಿಲಿಯನ್ ಗಡಿಯನ್ನು ತಲುಪುವ ನಿರೀಕ್ಷೆಯಿದೆ.

ಪ್ರಯಾಗ್ ರಾಜ್ ಮಹಾಕುಂಭ ಆರಂಭವಾಗಿ 11 ದಿನ: 9 ಕೋಟಿಗೂ ಅಧಿಕ ಮಂದಿ ಭಾಗಿ
ಮಹಾಕುಂಭ ಮೇಳದಲ್ಲಿ ಭಕ್ತಸಾಗರ
Published On :

ಪ್ರಯಾಗರಾಜ: ಶತಮಾನಗಳ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಮಹಾಕುಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನೆರವೇರುತ್ತಿದ್ದು ದೇಶದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ವಿದೇಶಗಳಿಂದಲೂ ಜನರು ಬರುತ್ತಿದ್ದಾರೆ.

ಮಹಾಕುಂಭ ಆರಂಭವಾದಾಗಿನಿಂದ ಇಲ್ಲಿಯವರೆಗೆ 11 ದಿನಗಳಲ್ಲಿ, 97.3 ಮಿಲಿಯನ್‌ಗಿಂತಲೂ(9,73,00,000) ಹೆಚ್ಚು ಭಕ್ತರು, ಕಲ್ಪವಾಸಿಗಳು ಮತ್ತು ವಿವಿಧ ಮಠಾಧೀಶರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಉತ್ಸವದ 11 ನೇ ದಿನದ ಇಂದಿನ ಅಂತ್ಯದ ವೇಳೆಗೆ ಒಟ್ಟು ಭಾಗವಹಿಸುವವರ ಸಂಖ್ಯೆ 100 ಮಿಲಿಯನ್ ಗಡಿಯನ್ನು ತಲುಪುವ ನಿರೀಕ್ಷೆಯಿದೆ.

ಉತ್ತರ ಪ್ರದೇಶ ಸರ್ಕಾರದ ಮಾಹಿತಿಯ ಪ್ರಕಾರ, ಇಂದು ಒಂದೇ ದಿನ 16.98 ಲಕ್ಷಕ್ಕೂ ಹೆಚ್ಚು ಜನರು ಗಂಗಾ, ಯಮುನಾ ಮತ್ತು ಸರಸ್ವತಿಯ ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಈ ಬಾರಿ ಮಹಾಕುಂಭದಲ್ಲಿ 45 ಕೋಟಿಗೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಉತ್ತರ ಪ್ರದೇಶ ಸರ್ಕಾರ ಅಂದಾಜಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.