ಮರಾಠಾ ಮೀಸಲಾತಿಗಾಗಿ ಜರಂಗೆ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ
ಮರಾಠರಿಗೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶನಿವಾರ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಕಳೆದ 16 ತಿಂಗಳಲ್ಲಿ ಇದು ಅವರ ಏಳನೇ ಉಪವಾಸ ಸತ್ಯಾಗ್ರಹವಾಗಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ಮರಾಠ ಮೀಸಲಾತಿ ಕಿಚ್ಚು ಹೊತ್ತಿಕೊಂಡಿದ್ದು, ಮೀಸಲಾತಿಗಾಗಿ ಈ ಹಿಂದೆ ಹಲವು ಬಾರಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಮನೋಜ್ ಜರಂಗೆ ಈಗ ಮತ್ತೊಮ್ಮೆ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.
ಜಾಲ್ನಾ ಮೂಲದ ಸಾಮಾಜಿಕ ಕಾರ್ಯಕರ್ತ ಮನೋಜ್ ಜರಂಗೆ ಅವರು ಮರಾಠರಿಗೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಶನಿವಾರ ಮತ್ತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಕಳೆದ 16 ತಿಂಗಳಲ್ಲಿ ಇದು ಅವರ ಏಳನೇ ಉಪವಾಸ ಸತ್ಯಾಗ್ರಹವಾಗಿದೆ.
ತಮ್ಮ ಕೋಟಾ ಬೇಡಿಕೆಯ ಜೊತೆಗೆ, ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಜರಂಗೆ ಆಗ್ರಹಿಸಿದ್ದಾರೆ.
ಕುಂಬಿ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ(ಒಬಿಸಿ) ವರ್ಗದಡಿಯಲ್ಲಿ ಮರಾಠ ಮೀಸಲಾತಿ ನೀಡಿದ್ದಕ್ಕಾಗಿ ಅವರನ್ನು ಮರಾಠಾ ಸಮುದಾಯದ ರಕ್ತಸಂಬಂಧಿಗಳು ಎಂದು ಗುರುತಿಸುವ ಕರಡು ಅಧಿಸೂಚನೆಯನ್ನು ಜಾರಿಗೆ ತರಬೇಕೆಂದು ಜರಂಗೆ ಒತ್ತಾಯಿಸಿದ್ದಾರೆ.
ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಸಂತೋಷ್ ದೇಶಮುಖ್ ಅವರನ್ನು ಡಿಸೆಂಬರ್ 9, 2024 ರಂದು ಅಪಹರಿಸಿ, ಚಿತ್ರಹಿಂಸೆ ನೀಡಿ, ಹತ್ಯೆ ಮಾಡಲಾಗಿದೆ. ಪೊಲೀಸರು ಇದುವರೆಗೆ ಏಳು ಜನರನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜರಂಗೆ ಆಗ್ರಹಿಸಿದ್ದಾರೆ.
ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜರಂಗೆ, ಮರಾಠಾ ಸಮುದಾಯದ ಬೇಡಿಕೆಗಳನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪರಿಹರಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



