ಕಾಲ್ತುಳಿತದ ಬೆನ್ನಲ್ಲೇ Mahakumbh Melaದಲ್ಲಿ ಮತ್ತೊಂದು ಅವಘಡ!
ಗುರುವಾರ (ಜ.30 ರಂದು) ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಕಾಲ್ತುಳಿತ ಉಂಟಾದ ಬೆನ್ನಲ್ಲೇ ಮತ್ತೊಂದು ಭಾರಿ ಅನಾಹುತ ಸಂಭವಿಸಿದೆ.
ಕುಂಭಮೇಳಕ್ಕಾಗಿ ನಿರ್ಮಿಸಲಾಗಿರುವ ಪ್ರಯಾಗ್ ರಾಜ್ ನ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವು ಟೆಂಟ್ ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಈ ವರೆಗೂ ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.
ಗುರುವಾರ ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.
ಪ್ರಪಂಚದಾದ್ಯಂತದ ಜನರಿಗೆ ಅಪಾರ ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಮಹಾಕುಂಭಮೇಳ 144 ವರ್ಷಗಳ ಬಳಿಕ ನಡೆಯುತ್ತಿದೆ.
ಅಧಿಕಾರಿಗಳು ಕಾರ್ಯಕ್ರಮಕ್ಕಾಗಿ ವ್ಯಾಪಕ ವ್ಯವಸ್ಥೆಗಳನ್ನು ಮಾಡಿದ್ದಾರೆ. ಆದರೆ ಭಾರಿ ಜನಸಂದಣಿ ಕಳವಳವನ್ನುಂಟುಮಾಡಿದೆ. ಜ.29 ಒಂದೇ ದಿನ ದಾಖಲೆಯ ಪ್ರಮಾಣದಲ್ಲಿ ಜನರು ಮಹಾಕುಂಭದಲ್ಲಿ ಭಾಗವಹಿಸಿದ್ದು, ಅದನ್ನು ನಿರ್ವಹಿಸುವುದು ಸವಾಲಿನ ಸಂಗತಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



