ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ; ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ
ಜ.31ರಿಂದ ಏಪ್ರಿಲ್4 ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ.

ನವದೆಹಲಿ: ನರೇಂದ್ರ ಮೋದಿ 3.0 ಸರ್ಕಾರದ 2ನೇ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಜಂಟಿ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಿದ್ದಾರೆ. ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಜ.31ರಿಂದ ಏಪ್ರಿಲ್4 ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ. 2ನೇ ಹಂತದ ಬಜೆಟ್ ಅಧಿವೇಶನ ಮಾರ್ತ್ 10ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾಗಲಿದೆ.
ಕೇಂದ್ರ ಸರ್ಕಾರವು ಬಜೆಟ್ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಮುಂದಾಗಿದೆ. ವಿಮಾನ ವಸ್ತುಗಳ ಮೇಲಿನ ಹಿತಾಸಕ್ತಿಗಳ ರಕ್ಷಣೆ ಮಸೂದೆ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ, ವಲಸೆ ಮತ್ತು ವಿದೇಶಿಯ ಮಸೂದೆ ಜಾರಿಗೆ ಮುಂದಾಗಿದೆ. ಜೊತೆಗೆ ಹಿಂದಿನ ಅಧಿವೇಶನದಿಂದ ಉಭಯ ಸದನಗಳಲ್ಲಿ ಇನ್ನೂ 10 ಮಸೂದೆಗಳು ಬಾಕಿ ಉಳಿದಿದ್ದು, ಅವುಗಳನ್ನೂ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಈ ವರ್ಷದ ಕೊನೆಯಲ್ಲಿ ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎರಡು ಮಿತ್ರಪಕ್ಷಗಳಾದ ಜೆಡಿಯೂ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಎರಡೂ ಪಕ್ಷಗಳು ತಮ ರಾಜ್ಯಕ್ಕೆ ನಿರ್ಣಾಯಕ ಘೋಷಣೆಗಳನ್ನು ಎದುರು ನೋಡುತ್ತಿವೆ. ಫೆಬ್ರವರಿ 5, 2025 ರಂದು ದೆಹಲಿ ವಿಧಾನಸಭಾ ಚುನಾವಣೆ ನಿಗದಿಯಾಗಿರುವ ದೃಷ್ಟಿಯಿಂದ ಬಜೆಟ್‌ನಲ್ಲಿ ದೆಹಲಿ ಕೇಂದ್ರಿತ ಯಾವುದೇ ಘೋಷಣೆಗಳನ್ನು ಮಾಡದಂತೆ ಚುನಾವಣಾ ಆಯೋಗವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಆಪ್ ಪಾಲಿಗೆ ದೆಹಲಿ ಚುನಾವಣಾ ಫಲಿತಾಂಶ ನಿರ್ಣಾಯಕವಾಗಲಿದ್ದು, ಅಧಿವೇಶನದತ್ತ ಚಿತ್ತ ಹರಿಸಲಿದೆ. ದೆಹಲಿ ಚುನಾವಣಾ ಕದನದಲ್ಲಿ ಹಲವಾರು ಮಿತ್ರಪಕ್ಷಗಳು ಎಎಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದರೊಂದಿಗೆ ಇಂಡಿಯಾ ಮೈತ್ರಿಕೂಟದ ಒಡಕು ಆಡಳಿತ ಪಕ್ಷಕ್ಕೆ ಒಂದು ರೀತಿಯಲ್ಲಿ ನೈತಿಕ ಜಲ ಹೆಚ್ಚಿಸಿದೆ ಎಂದು ಹೇಳಲಾಗಿದೆ.
ಈ ನಡುವೆ ಸುಗಮ ಕಲಾಪ ನಡೆಸುವ ಉದ್ದೇಶದಿಂದ ಸರ್ಕಾರ ಗುರುವಾರ ಸರ್ವಪಕ್ಷಗಳ ಸಭೆ ನಡೆಸಿದ್ದು, ಸಭೆಯಲ್ಲಿ 36 ಪಕ್ಷಗಳ 52 ನಾಯಕರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2025: ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಬೇಕು, ಸಿಎಂ ಸಿದ್ದರಾಮಯ್ಯ ಒತ್ತಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


