ದೇಶ

Jammu-Kashmir: ಪೂಂಚ್ ಎಲ್‌ಒಸಿಯಲ್ಲಿ ಒಳನುಸುಳಲು ಯತ್ನ; ಇಬ್ಬರು ಉಗ್ರರ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಎಲ್‌ಒಸಿ ಉದ್ದಕ್ಕೂ ನಿಯೋಜಿಸಲಾದ ಭದ್ರತಾ ಪಡೆ ಸಿಬ್ಬಂದಿ ಗುರುವಾರ ಈ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ.

Jammu-Kashmir: ಪೂಂಚ್ ಎಲ್‌ಒಸಿಯಲ್ಲಿ ಒಳನುಸುಳಲು ಯತ್ನ; ಇಬ್ಬರು ಉಗ್ರರ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಪ್ರಾತಿನಿಧಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಖಾರಿ ಕರ್ಮರಾ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರಿ ಶಸ್ತ್ರಸಜ್ಜಿತ ಉಗ್ರರ ಗುಂಪೊಂದು ಒಳನುಸುಳಲು ಯತ್ನಿಸುವಾಗ ಭದ್ರತಾ ಪಡೆ ಅದನ್ನು ವಿಫಲಗೊಳಿಸಿದೆ. ಬಳಿಕ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಶುಕ್ರವಾರ ತಿಳಿಸಿದೆ.

ಎಲ್‌ಒಸಿ ಉದ್ದಕ್ಕೂ ನಿಯೋಜಿಸಲಾದ ಭದ್ರತಾ ಪಡೆ ಸಿಬ್ಬಂದಿ ಗುರುವಾರ ಈ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದೆ. ಉಗ್ರರು ಒಳನುಸುಳಲು ಯತ್ನಿಸುತ್ತಿದ್ದಂತೆ ಯೋಧರು ಗುಂಡಿನ ದಾಳಿ ನಡೆಸಿದ್ದು, ಉಗ್ರರು ಪ್ರತಿದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿಯಿಡೀ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯು ಇನ್ನೂ ಪ್ರಗತಿಯಲ್ಲಿದೆ. ಈ ಪ್ರದೇಶದ ಸುತ್ತಲೂ ಕಾರ್ಡನ್ ಅನ್ನು ಬಿಗಿಗೊಳಿಸಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಭದ್ರತಾ ಪಡೆಗಳು ನಡೆಯುತ್ತಿರುವ ಶೋಧ ಕಾರ್ಯಾಚರಣೆಯ ಭಾಗವಾಗಿ ವೈಮಾನಿಕ ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಬಳಸಿಕೊಳ್ಳುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.