ತಂತ್ರಜ್ಞಾನ, ಜಾರಿ ಅಡೆತಡೆಗಳಿಂದ ಹಳೆ ವಾಹನಗಳಿಗೆ ಪೆಟ್ರೋಲ್/ಡೀಸೆಲ್ ನಿಷೇಧ ಅಸಾಧ್ಯ: ದೆಹಲಿ ಸರ್ಕಾರ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ನವದೆಹಲಿ: ತಾಂತ್ರಿಕ ಸವಾಲುಗಳು ಮತ್ತು ಸಂಕೀರ್ಣ ವ್ಯವಸ್ಥೆಗಳಿಂದಾಗಿ ಹಳೆಯ ವಾಹನಗಳಿಗೆ ಇಂಧನ(ಪೆಟ್ರೋಲ್, ಡೀಸೆಲ್) ನಿಷೇಧ ಕಾರ್ಯಸಾಧ್ಯವಲ್ಲ ಎಂದು ದೆಹಲಿ ಸರ್ಕಾರ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ(CAQM) ಪತ್ರ ಬರೆದಿದೆ.
ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.
ರಾಷ್ಟ್ರ ರಾಜಧಾನಿ ಪ್ರದೇಶದಾದ್ಯಂತ(NCR) ನಿಷೇಧವನ್ನು ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ. ಆದರೆ ಹಳೆಯ ವಾಹನಗಳಿಗೆ "ಕಠಿಣ ಮಾನದಂಡಗಳನ್ನು" ನಿಗದಿಪಡಿಸಿದ್ದಕ್ಕಾಗಿ ಹಿಂದಿನ AAP ಆಡಳಿತವನ್ನು ಅವರು ಟೀಕಿಸಿದರು.
ಜುಲೈ 1 ರಿಂದ ದೆಹಲಿ ಸರ್ಕಾರವು, ನೋಂದಣಿ ರದ್ದುಪಡಿಸಲಾದ ಮತ್ತು ನ್ಯಾಯಾಲಯದ ಆದೇಶದ ಪ್ರಕಾರ ರಸ್ತೆಗಳಲ್ಲಿ ಓಡಾಡಲು ಅನುಮತಿಸದ - ಡೀಸೆಲ್ ವಾಹನಗಳಿಗೆ 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷ ಅಥವಾ ಅದಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸಲಾಗಿದೆ.
ನಿಷೇಧ ಜಾರಿಗೆ ಬಂದ ನಂತರ ಇಂಧನ ತುಂಬಿಸಲು ಪೆಟ್ರೋಲ್ ಪಂಪ್‌ಗಳಿಗೆ ತೆರಳುವ ಹಳೆಯ ವಾಹನಗಳನ್ನು ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



